ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು ಗೋಲಿಬಾರ್; 1 ಕೋಟಿ ಪರಿಹಾರಕ್ಕೆ ಆಗ್ರಹ

|
Google Oneindia Kannada News

ಮಂಗಳೂರು, ಡಿಸೆಂಬರ್ 20: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮಂಗಳೂರಿನಲ್ಲಿ ಗುರುವಾರ ಬೃಹತ್ ಹೋರಾಟ ನಡೆಯಿತು. ಪ್ರತಿಪಭಟನೆ ವೇಳೆ ಪೊಲೀಸರು ಗೋಲಿಬಾರ್ ನಡೆಸಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ.

ಗೋಲಿಬಾರ್‌ನಲ್ಲಿ ಮೃತಪಟ್ಟ ನೌಶೀನ್ ಕುದ್ರೋಳಿ ಹಾಗೂ ಅಬ್ದುಲ್ ಜಲೀಲ್ ಮರಣೋತ್ತರ ಪರೀಕ್ಷೆ ವೆನ್ ಲಾಕ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಬಳಿಕ ಶವವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ. ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಮಂಗಳೂರು ಗೋಲಿಬಾರ್: ಸರ್ಕಾರಕ್ಕೆ ಕುಮಾರಸ್ವಾಮಿ ಪಂಚ ಪ್ರಶ್ನೆಗಳುಮಂಗಳೂರು ಗೋಲಿಬಾರ್: ಸರ್ಕಾರಕ್ಕೆ ಕುಮಾರಸ್ವಾಮಿ ಪಂಚ ಪ್ರಶ್ನೆಗಳು

"ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರು ಯುವಕರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು" ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ.ಮುಹಮ್ಮದ್ ಮಸೂದ್ ಒತ್ತಾಯಿಸಿದ್ದಾರೆ.

ಮಂಗಳೂರು ಪೊಲೀಸರ ಫೈರಿಂಗ್, ಪೊಲೀಸ್ ಆಯುಕ್ತ ಏನು ಹೇಳುತ್ತಾರೆ?ಮಂಗಳೂರು ಪೊಲೀಸರ ಫೈರಿಂಗ್, ಪೊಲೀಸ್ ಆಯುಕ್ತ ಏನು ಹೇಳುತ್ತಾರೆ?

ಗೋಲಿಬಾರ್‌ನಲ್ಲಿ ಮೃತಪಟ್ಟ ನೌಶೀನ್ ಕುದ್ರೋಳಿ ಹಾಗೂ ಅಬ್ದುಲ್ ಜಲೀಲ್ ಅಂತ್ಯಕ್ರಿಯೆ ಸಂಜೆಯ ವೇಳೆಗೆ ನಡೆಯಲಿದೆ.

ಸಿಎಎ ವಿರುದ್ಧ ಪ್ರತಿಭಟನೆ: ಮಂಗಳೂರು ಪೊಲೀಸರ ಗುಂಡಿಗೆ ಇಬ್ಬರು ಬಲಿಸಿಎಎ ವಿರುದ್ಧ ಪ್ರತಿಭಟನೆ: ಮಂಗಳೂರು ಪೊಲೀಸರ ಗುಂಡಿಗೆ ಇಬ್ಬರು ಬಲಿ

1 ಕೋಟಿ ರೂ. ಪರಿಹಾರ ನೀಡಿ

1 ಕೋಟಿ ರೂ. ಪರಿಹಾರ ನೀಡಿ

ಆಲ್ ಇಂಡಿಯಾ ಮುಸ್ಲಿಂ ಡೆವಲಪ್ಮೆಂಟ್ ಕೌನ್ಸಿಲ್ ಮಂಗಳೂರು ನಗರದಲ್ಲಿ ಗೋಲಿಬಾರ್ ನಡೆಸುವ ಸನ್ನಿವೇಶ ಇಲ್ಲದಿದ್ದರೂ ಪೊಲೀಸರು ಗೋಲಿಬಾರ್ ನಡೆಸಿರುವುದು ಖಂಡನೀಯ. ಮೃತಪಟ್ಟ ಇಬ್ಬರ ಕುಟುಂಬಕ್ಕೂ 1 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದೆ.

25 ಲಕ್ಷ ಪರಿಹಾರ ನೀಡಿ

25 ಲಕ್ಷ ಪರಿಹಾರ ನೀಡಿ

ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಗಾಯಾಳುಗಳಿಗೆ 25 ಲಕ್ಷ ಪರಿಹಾರ ನೀಡಬೇಕು ಮತ್ತು ಚಿಕಿತ್ಸಾ ವೆಚ್ಚವನ್ನು ಭರಿಸಬೇಕು. ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಕರ್ಫ್ಯೂ ಸಡಿಲಿಕೆ

ಕರ್ಫ್ಯೂ ಸಡಿಲಿಕೆ

ಮಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆದರೆ, ಶುಕ್ರವಾರ ಜುಮಾ ನಮಾಝ್ ಮಾಡಲು ಪೊಲೀಸರು ಅವಕಾಶ ನೀಡಿದ್ದಾರೆ. ಮಧ್ಯಾಹ್ನ 12 ರಿಂದ 2 ಗಂಟೆಯ ತನಕ ಮುಸ್ಲಿಂಮರು ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮನೆಯಿಂದ ಹೊರ ಬರದಂತೆ ಸೂಚನೆ

ಮನೆಯಿಂದ ಹೊರ ಬರದಂತೆ ಸೂಚನೆ

ಮಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಜನರು ಮನೆಯಿಂದ ಹೊರ ಬಾರದಂತೆ ಪೊಲೀಸರು ಮೈಕ್ ಮೂಲಕ ಘೋಷಣೆ ಮಾಡುತ್ತಿದ್ದಾರೆ. ಗೋಲಿಬಾರ್‌ನಲ್ಲಿ ಮೃತಪಟ್ಟ ನೌಶೀನ್ ಕುದ್ರೋಳಿ ಹಾಗೂ ಅಬ್ದುಲ್ ಜಲೀಲ್ ಅಂತ್ಯಕ್ರಿಯೆ ಸಂಜೆಯ ವೇಳೆಗೆ ನಡೆಯಲಿದೆ.

English summary
Two killed in police golibar in Mangaluru in the time of protests against the controversial Citizenship Amendment Act (CAA). Various organizations demand for composition for family members.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X