ಕುಳಾಯಿ ಮೀನುಗಾರಿಕಾ ಬಂದರಿಗೆ ಕೇಂದ್ರದಿಂದ 196 ಕೋಟಿ ರೂ. ಅನುದಾನ
ಮಂಗಳೂರು, ಆಗಸ್ಟ್ 10: ನವಮಂಗಳೂರಿನ ಕುಳಾಯಿ ಮೀನುಗಾರಿಕಾ ಬಂದರು ನಿರ್ಮಾಣ ಯೋಜನೆಗೆ ಕೇಂದ್ರ ಸರಕಾರವು ಅನುಮೋದನೆ ನೀಡಿ 196 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ.
ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಮೀನುಗಾರಿಕಾ ಕ್ಷೇತ್ರದ ಪದಾಧಿಕಾರಿಗಳ ನಿಯೋಗವು ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವರಾದ ರಾಧಾ ಮೋಹನ್ ಸಿಂಗ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಈ ವೇಳೆ ಯೋಜನೆಗೆ ಅನುಮೋದನೆ ನೀಡಿ 196 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ.

ಇದೇ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ಮಂಗಳೂರು ಮೀನುಗಾರಿಕಾ ಬಂದರಿನ 3ನೇ ಹಂತದ ಯೋಜನೆಗೆ 32.20 ಕೋಟಿ ರೂಪಾಯಿ ಅನುದಾನವನ್ನೂ ಕೇಂದ್ರ ಸರಕಾರದಿಂದ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷರಾದ ನಿತಿನ್ ಕುಮಾರ್, ಕರ್ನಾಟಕ ಪರ್ಸಿನ್ ಬೋಟ್ ಮೀನುಗಾರರ ಸಂಘದ ಅಧ್ಯಕ್ಷರಾದ ಮೋಹನ್ ಬೆಂಗ್ರೆ, ಕರ್ನಾಟಕ ಕರಾವಳಿ ಮೀನುಗಾರರ ಕ್ರೀಯಾ ಸಂಘದ ಅಧ್ಯಕ್ಷರಾದ ಮನೋಹರ್ ಬೋಳೂರು, ಮೀನುಗಾರ ಪ್ರಮುಖರಾದ ಅನಿಲ್ ಕುಮಾರ್, ಇಬ್ರಾಹಿಂ ಬೆಂಗ್ರೆ, ನವೀನ್ ಬಂಗೇರ, ಬಾಬು ಉಳ್ಳಾಲ್, ದಯಾನಂದ ಇವರು ಉಪಸ್ಥಿತರಿದ್ದರು.












Click it and Unblock the Notifications