• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸರ್ಕಾರಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಗುತ್ತಿಗೆ ಸೇವೆ

By Kiran B Hegde
|

ಮಂಗಳೂರು, ನ. 25: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 65ಕ್ಕಿಂತ ಕಡಿಮೆ ವಯಸ್ಸಿನ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ 3 ವರ್ಷ ಅಥವಾ ಮುಂದಿನ ಆದೇಶ ನೀಡುವವರಿಗೆ ನೇಮಿಸಿಕೊಳ್ಳಲಾಗುವುದು. ಆಸಕ್ತ ಖಾಸಗಿ ವೈದ್ಯರಿಗೆ ಮಾಸಿಕ ಹಾಗೂ ದಿನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಕೂಡ ಅವಕಾಶ ನೀಡಲಾಗುವುದು ಎಂದು ತಿಳಿಸಿದರು. [ಸರ್ಕಾರಿ ಆಸ್ಪತ್ರೆಗೆ ತಜ್ಞ ವೈದ್ಯರು ಬರುತ್ತಿಲ್ಲ]

ಅರವಳಿಕೆ ತಜ್ಞರು ಪ್ರತಿ ಶಸ್ತ್ರಚಿಕಿತ್ಸೆ ಲೆಕ್ಕದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ. ಯುವಕರನ್ನು ನೇಮಿಸಿಕೊಂಡು ಸ್ಕ್ಯಾನ್‌ನಂತಹ ಸೇವೆಗಳಿಗೆ ತರಬೇತಿ ನೀಡಲಾಗುವುದು. ರಾಜ್ಯದಲ್ಲಿ ವಿಕಿರಣ ಶಾಸ್ತ್ರಜ್ಞರ ಕೊರತೆ ಇರುವ ಹಿನ್ನೆಲೆಯಲ್ಲಿ ಅಂತರ್ಜಾಲದ ಮೂಲಕ ಅವರ ಸೇವೆ ಪಡೆಯಲಾಗುವುದೆಂದು ತಿಳಿಸಿದರು. [ವೈದ್ಯರ ಸಂಬಳ ಡಬಲ್]

ಪ್ರಸೂತಿ, ಅರವಳಿಕೆ, ಮಕ್ಕಳ ತಜ್ಞರಿಗೆ ಮಾಸಿಕ 50 ಸಾವಿರ ರೂ. ವೇತನ ಹಾಗೂ ಹೊರರೋಗಿ ವಿಭಾಗದಲ್ಲಿ ಕಾರ್ಯನಿರ್ವಹಿಸುವವರಿಗೆ ದಿನಕ್ಕೆ ಒಂದು ಸಾವಿರ ರೂ. ಗೌರವ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ. [ಇಂದು ವೈದ್ಯರ ಸಾಮೂಹಿಕ ರಾಜೀನಾಮೆ]

ಶಾಸಕರೂ ಸಿದ್ಧ: ವೈದ್ಯಕೀಯ ವೃತ್ತಿ ಕಲಿತು ಶಾಸಕರಾದ ಹಲವರು ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ. ರಾಜ್ಯದಲ್ಲಿ 9 ವೈದ್ಯಕೀಯ ಕಲಿತ ಶಾಸಕರಿದ್ದಾರೆ. ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ಆರೋಗ್ಯ ಕೇಂದ್ರ, ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಲು ಒಪ್ಪಿಗೆ ನೀಡಲಾಗಿದೆ ಎಂದು ಖಾದರ್ ತಿಳಿಸಿದ್ದಾರೆ. [ವೈದ್ಯರಿಗೆ ಖಡಕ್ ಎಚ್ಚರಿಕೆ]

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
State minister for Health and Family Welfare U.T. Khader told that, specialists below the age of 65 will be hired on contract basis to fill up vacant posts in government hospitals. Doctors would be given a salary offer of Rs. 50,000 per month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more