ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಾಲತಾಣದಲ್ಲಿ ಪ್ರಧಾನಿ ವಿರುದ್ಧ ಅವಹೇಳನಕಾರಿ ಸಂದೇಶ, ಸರ್ಕಾರಿ ನೌಕರನ ಬಂಧನ

|
Google Oneindia Kannada News

ಮಂಗಳೂರು ಆಗಸ್ಟ್ 17: ಸಾಮಾಜಿಕ ಜಾಲತಾಣದಲ್ಲಿ ಆರ್ ಎಸ್ ಎಸ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಅವಹೇಳನಕಾರಿ ಸಂದೇಶ ಹರಿಬಿಟ್ಟ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಸಿಬ್ಬಂದಿ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಭೂಮಾಪನ ಇಲಾಖೆಯ ಸಿಬ್ಬಂದಿ ಮಹೇಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಮಹೇಶ್ ಅವರು ಸರಕಾರಿ ಉದ್ಯೋಗಿ ಆಗಿದ್ದರೂ ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ ಮತ್ತು ಆರ್ ಎಸ್ ಎಸ್ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ತನ್ನ ಫೇಸ್‍ಬುಕ್ ಖಾತೆ ಹಾಗೂ ವಾಟ್ಸ್ಅಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಉಗ್ರರ ಕುರಿತು ಗುಪ್ತಚರ ವರದಿ: ಮಂಗಳೂರಿನಲ್ಲಿಯೂ ಕಟ್ಟೆಚ್ಚರಉಗ್ರರ ಕುರಿತು ಗುಪ್ತಚರ ವರದಿ: ಮಂಗಳೂರಿನಲ್ಲಿಯೂ ಕಟ್ಟೆಚ್ಚರ

ಮಹೇಶ್ ಅವಹೇಳನಕಾರಿ ಪದ ಬಳಸಿ ಸಂದೇಶಗಳನ್ನು ತನ್ನ ವಾಟ್ಸ್ಆ್ಯಪ್ ಸ್ಟೇಟಸ್ ಹಾಕಿಕೊಂಡಿದ್ದಾಗಿ ಹಿಂದೂ ಜಾಗರಣ ವೇದಿಕೆಯ ಕಡಬ ಶಾಖೆಯ ಮುಖಂಡ ವೆಂಕಟ್ರಮಣ ಕೋಡಿಂಬಾಳ ಎಂಬುವರು ಕಡಬ ಪೊಲೀಸ್ ಠಾಣೆಗೆ ಮಹೇಶ್ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ ಪೊಲೀಸರು ಮಹೇಶ್ ನನ್ನು ಬಂಧಿಸಿದ್ದಾರೆ.

Government Employee Arrested for Offensive Post In Social Media

ಮಹೇಶ್‍ ಅವರನ್ನು ಸೇವೆಯಿಂದ ವಜಾಗೊಳಿಸಿ ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣ ವೇದಿಕೆ ಒತ್ತಾಯಿಸಿದೆ. ಮಹೇಶ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಕಡಬ ತಾಲೂಕು ಬಂದ್‍ಗೆ ಕರೆ ನೀಡಿ ಉಗ್ರ ರೀತಿಯ ಹೋರಾಟ ನಡೆಸಲಾಗುವುದು ಎಂದು ಹಿಂದು ಜಾಗರಣ ವೇದಿಕೆ ಎಚ್ಚರಿಸಿದೆ.

English summary
Kadaba Police arrested government employee for offensive post against PM Narendra Modi ,Chief Minister B S Yediyurappa and RSS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X