ಮಠಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡಬೇಡಿ : ಪೂಜಾರಿ

ಮಂಗಳೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಜನಾರ್ದನ ಪೂಜಾರಿ, ರಾಜ್ಯ ಸರ್ಕಾರ ಮಠಗಳ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ, ಮುಜರಾಯಿ ಇಲಾಖೆ ವ್ಯಾಪ್ತಿಗೆ ಮಠಗಳನ್ನು ತರುವುದು. ಆಡಳಿತಾಧಿಕಾರಿ ನೇಮಕ ಮಾಡುವುದು ಮುಂತಾದ ಕ್ರಮಗಳನ್ನು ಸರ್ಕಾರ ಕೈಗೊಳ್ಳಬಾರದು ಎಂದು ಹೇಳಿದರು.
ಮಠಗಳ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿರುವವರು ಮಠಗಳ ವಿಷಯದಲ್ಲಿ ಮುಖ್ಯಮಂತ್ರಿಗಳ ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ಮಠಗಳ ರಾಷ್ಟ್ರೀಕರಣ, ಆಡಳಿತಾಧಿಕಾರಿ ನೇಮಕ ಮುಂತಾದ ವಿಚಾರಗಳಲ್ಲಿ. ಆದರೂ ಸರ್ಕಾರ ಏಕೆ ಮಠಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಪೂಜಾರಿ ಪ್ರಶ್ನಿಸಿದರು.
ಮಠಗಳ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿದರೆ ಜನರ ನಂಬಿಕೆಯನ್ನು ಪ್ರಶ್ನಿಸಿದಂತಾಗುತ್ತದೆ. ಉಡುಪಿ ಕೃಷ್ಣ ಮಠ, ಸಿದ್ದಗಂಗಾ ಮಠ, ಸುತ್ತೂರು ಮಠ ಮುಂತಾದವುಗಳು ಸಮಾಜದಲ್ಲಿನ ದುರ್ಬಲ ವರ್ಗದವಿಗೆ ಸಹಾಯ ಮಾಡುತ್ತಿದೆ. ಸಮಾಜ ಸೇವೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿವೆ. ಇಂತಹ ಮಠಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವುದು ಸರಿಯಲ್ಲ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರ ಮಠಗಳನ್ನು ಸ್ವಾಧೀನ ಪಡಿಸಿಕೊಳ್ಳುವುದು, ಮಠಗಳಿಗೆ ಆಡಳಿತಾಧಿಕಾರಿ ನೇಮಕ ಮಾಡುವುದೂ ಸರಿಯಲ್ಲ ಆದರೆ ಸಿಎಂ ಜೊತೆಗಿರುವವರು ಸಿಎಂಗೆ ಈ ಕುರಿತು ಸಲಹೆ ನೀಡುವ ಮೂಲಕ ಸಿದ್ದರಾಮಯ್ಯ ಅವರ ದಾರಿ ತಪ್ಪಿಸುತ್ತಿದ್ದಾರೆ. ಇಂತಹ ಸಲಹೆಗಳಿಗೆ ಸಿಎಂ ಮಣಿಯಬಾರದು ಇಂತಹ ಯೋಚನೆಗಳನ್ನು ಕೈ ಬಿಡಬೇಕು ಎಂದು ಅವರು ಒತ್ತಾಯಿಸಿದರು.











Click it and Unblock the Notifications