ಉಜಿರೆ; ಮತ ಎಣಿಕೆ ಕೇಂದ್ರದ ಮುಂದೆ ಪಾಕಿಸ್ತಾನ ಪರ ಘೋಷಣೆ
ಮಂಗಳೂರು, ಡಿಸೆಂಬರ್ 30: ಕರ್ನಾಟಕದ 5,728 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ದಕ್ಷಿಣ ಕನ್ನಡದಲ್ಲಿ ಮತ ಎಣಿಕೆ ಕೇಂದ್ರದ ಬಳಿ ಪಾಕಿಸ್ತಾನ ಪರವಾದ ಘೋಷಣೆಯನ್ನು ಕೂಗಲಾಗಿದೆ.
ಬುಧವಾರ ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕೆ ಕೇಂದ್ರದ ಹೊರಗೆ ಪಾಕಿಸ್ತಾನ ಪರವಾದ ಘೋಷಣೆ ಕೂಗಲಾಗಿದೆ. ಪೊಲೀಸರು ಸಹ ಈ ಸಮಯದಲ್ಲಿ ಅಲ್ಲಿಯೇ ಇದ್ದರು.
ಬಿಜೆಪಿ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮತ ಕೇಂದ್ರದ ಹೊರಗೆ ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಆಗ ಎಸ್‌ಡಿಪಿಐನ ಕೆಲವು ಕಾರ್ಯಕರ್ತರು ಪಾಕಿಸ್ತಾನ ಪರವಾದ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.

'ಪಾಕಿಸ್ತಾನ್ ಜಿಂದಾಬಾದ್' ಎಂದು ಘೋಷಣೆ ಕೂಗುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಪರಿಶೀಲನೆ ಮಾಡಿ ಮುಂದಿ ಕ್ರಮ ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕೆಲವು ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ. ಆಗ ಎಸ್‌ಡಿಪಿಐ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದರು ಎಂದು ಕೆಲವರು ಹೇಳುತ್ತಿದ್ದಾರೆ. ತನಿಖೆ ಬಳಿಕ ಖಚಿತವಾದ ಮಾಹಿತಿ ಲಭ್ಯವಾಗಲಿದೆ.












Click it and Unblock the Notifications