ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷದ ಸಂಭ್ರಮಕ್ಕೆ ಪೊಲೀಸರ ಸೂಚನೆಗಳು

By ಐಸಾಕ್ ರಿಚರ್ಡ್, ಮಂಗಳೂರು
|
Google Oneindia Kannada News

ಮಂಗಳೂರು, ಡಿ. 28 : ಮಂಗಳೂರು ನಗರದಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸಾರ್ವಜನಿಕರಿಗೆ, ಹೊಟೇಲ್‌, ರೆಸ್ಟೋರೆಂಟ್‌, ಕ್ಲಬ್‌, ರೆಸಾರ್ಟ್‌ ಮತ್ತು ಸಂಘ ಸಂಸ್ಥೆಗಳಿಗೆ ಮಂಗಳೂರು ಪೊಲೀಸ್‌ ಆಯುಕ್ತರು ಕೆಲವು ಸೂಚನೆಗಳನ್ನು ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಹಿತೇಂದ್ರ ಅವರು ಸೂಚನೆಗಳನ್ನು ಹೊರಡಿಸಿದ್ದು, ನಗರದಲ್ಲಿ ಹೊಟೇಲ್‌, ರೆಸ್ಟೋರೆಂಟ್‌, ಕ್ಲಬ್‌, ರೆಸಾರ್ಟ್‌ ಮತ್ತು ಸಂಘ ಸಂಸ್ಥೆಗಳಲ್ಲಿ ಆಯೋಜಿಸುವ ಸಂಭ್ರಮಾಚರಣೆ ಕೂಟಗಳು ರಾತ್ರಿ 12.30ಕ್ಕೆ ಮುಕ್ತಾಯಗೊಳ್ಳಬೇಕು ಎಂದು ತಿಳಿಸಲಾಗಿದೆ. [ಬೆಂಗಳೂರಿನಲ್ಲಿ 2 ಗಂಟೆ ತನಕ ಬಾರ್ ಓಪನ್]

R.Hitendra

ಸಂಭ್ರಮಾಚರಣೆ ನೆಪದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಕರು ಡಿ.31 ರ ರಾತ್ರಿ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು ಎಂದು ಪೊಲೀಸರು ಸೂಚನೆ ನೀಡಿದ್ದು, ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಮುಖ ಸೂಚನೆಗಳು ಹೀಗಿವೆ

* ನಗರದ ಹೊಟೇಲ್‌, ರೆಸ್ಟೋರೆಂಟ್‌, ಕ್ಲಬ್‌, ರೆಸಾರ್ಟ್‌ ಮತ್ತು ಸಂಘ ಸಂಸ್ಥೆಗಳು ಹಾಗೂ ವಿಶೇಷ ಕೂಟಗಳು ಮಧ್ಯರಾತ್ರಿ 12-30ಕ್ಕೆ ಮುಕ್ತಾಯಗೊಳ್ಳಬೇಕು.

* ರೆಸ್ಟೋರೆಂಟ್‌ ಮತ್ತು ಮದ್ಯ ಸರಬರಾಜು ಮಾಡುವ ಹೊಟೇಲ್‌ಗ‌ಳಲ್ಲಿ ಸರ್ಕಾರ ನಿಗದಿ ಪಡಿಸಿದ ಸಮಯಕ್ಕಿಂತ ಹೆಚ್ಚು ಅವಧಿಗೆ ಹೊಸ ವರ್ಷಾಚರಣೆಯ ಕಾರ್ಯಕ್ರಮ ನಡೆಸಬೇಕಾದಲ್ಲಿ ಅಬಕಾರಿ ಇಲಾಖೆಯಿಂದ ಲಿಖಿತವಾಗಿ ಅನುಮತಿಪಡೆಯಬೇಕು.

* ಸಾರ್ವಜನಿಕ ಸ್ಥಳಗಳಲ್ಲಿ ಏರ್ಪಡಿಸಲಾಗಿರುವ ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಲ್ಲಿ, ಬಸ್ಸು ತಂಗುದಾಣ, ಸಾರ್ವಜನಿಕ ಉದ್ಯಾನವನಗಳು, ಕ್ರೀಡಾಂಗಣ, ರೈಲು ನಿಲ್ದಾಣ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ.

* ವಿದ್ಯಾರ್ಥಿಗಳು ಹಾಗೂ ಯುವಕರು ಡಿ.31 ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು, ಅಸಭ್ಯ ವರ್ತನೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

* ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆ ಬೆತ್ತಲೆ ಅಥವಾ ಬೆತ್ತಲೆ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಹೆಣ್ಣುಮಕ್ಕಳಿಗೆ ಮತ್ತು ಮಹಿಳೆಯರಿಗೆ ಶುಭ ಕೋರುವ ನೆಪದಲ್ಲಿ ಕೀಟಲೆ, ಅಸಭ್ಯ ವರ್ತನೆಯನ್ನು ತಡೆಯಲು ಕಾರ್ಯಪಡೆ ರಚಿಸಲಾಗಿದೆ.

* ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ.

* ಮನೆಗಳ ಮುಂದೆ, ವಿದ್ಯಾರ್ಥಿಗಳ ಹಾಸ್ಟೆಲ್‌, ವರ್ಕಿಂಗ್‌ ವುಮೆನ್ಸ್‌ ಹಾಸ್ಟೆಲ್‌ ಕಾಂಪೌಂಡ್‌ನೊಳಗಡೆ ಶುಭಾಶಯ ಕೋರುವ ನೆಪದಲ್ಲಿ ಅನಧಿಕೃತವಾಗಿ ಯಾವುದೇ ವ್ಯಕ್ತಿ ಅಥವಾ ಗುಂಪು ಹೋಗಿ ಅಸಭ್ಯವಾಗಿ ವರ್ತಿಸಬಾರದು.

English summary
With a view to maintain law and order in the Mangaluru city during the new year celebrations city police commissioner R.Hitendra has issued guidelines for hotels, restaurants, clubs, resorts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X