ಮಂಗಳೂರಿನಲ್ಲಿ ಹಜ್ ಯಾತ್ರೆಗೆ ಬೇಗ್ ಚಾಲನೆ
ಮಂಗಳೂರು, ಆ.28 : ಕರ್ನಾಟಕದಿಂದ ಈ ವರ್ಷದ ಹಜ್ ಯಾತ್ರೆ ಬುಧವಾರ ಆರಂಭಗೊಂಡಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಹೊರಟ ಯಾತ್ರೆಗೆ ವಾರ್ತಾ ಮತ್ತು ಹಜ್ ಖಾತೆ ಸಚಿವ ರೋಷನ್ ಬೇಗ್ ಚಾಲನೆ ನೀಡಿದರು. ಸೆ.12ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಎರಡನೇ ಸುತ್ತಿನ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಬುಧವಾರ ಬೆಳಗ್ಗೆ ರೋಷನ್ ಬೇಗ್ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಜ್ ಯಾತ್ರೆಗೆ ತೆರಳುವ ವಿಮಾನಕ್ಕೆ ಹಸಿರುನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್, ಶಾಸಕರಾದ ಮೊಹಿದೀನ್ ಬಾವಾ, ಜೆ.ಆರ್. ಲೋಬೋ ಮುಂತಾದವರು ಉಪಸ್ಥಿತರಿದ್ದರು.

ಯಾತ್ರೆಗೆ ಹಸಿರು ನಿಶಾನೆ ತೋರಿಸಿದ ಬಳಿಕ ಮಾತನಾಡಿ ರೋಷನ್ ಬೇಗ್, ಹಜ್ ಯಾತ್ರೆಗೆ ದೇಶದಲ್ಲೇ ಮೊದಲ ವಿಮಾನ ಮಂಗಳೂರಿನಿಂದ ಇಂದು ತೆರಳುತ್ತಿದೆ. ಬೆಂಗಳೂರಿನಲ್ಲಿ ಹಜ್ಯಾತ್ರೆಗೆ ಸೆಪ್ಟಂಬರ್ 12ರಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. [ಹಜ್ ಯಾತ್ರೆಗೆ 5ಸಾವಿರ ಯಾತ್ರಿಕರು]
ಮಂಗಳೂರಿನಿಂದ ಕುವೈತ್ಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟವು ಅಕ್ಟೋಬರ್ 27ರಿಂದ ಆರಂಭವಾಗಲಿದೆ. ಈ ಸಂಬಂಧ ಈಗಾಗಲೇ ಕೇಂದ್ರ ವಿಮಾನಯಾನ ಸಚಿವರ ಜೊತೆ ಹಾಗೂ ಏರ್ ಇಂಡಿಯಾ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು, ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದರು.
ಸಮಾರಂಭದಲ್ಲಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್ ಅವರು, ಮಂಗಳೂರು ಹಜ್ ಶಿಬಿರದಲ್ಲಿ ಸಾರ್ವಜನಿಕ ಮತ್ತು ಯಾತ್ರಿಕರ ಆರೋಗ್ಯ ಕಾಪಾಡಲು ಈಗಾಗಲೇ ವೈದ್ಯರ ಸುಸಜ್ಜಿತ ತಂಡವನ್ನು ನಿಯೋಜಿಸಲಾಗಿದೆ. [ಹಜ್ ಯಾತ್ರಿಕರಿಗೆ ಪುನರ್ಮನನ ಶಿಬಿರ]

ಯಾತ್ರಿಕರಿಗೆ ಯಾವುದೇ ರೀತಿಯ ತೊಂದರೆಗಳಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಆ.27ರಿಂದ ಸೆಪ್ಟಂಬರ್ 1ರವರೆಗೆ ಪ್ರತಿದಿನ ಒಂದು ವಿಮಾನ ಹಜ್ ಯಾತ್ರಿಕರನ್ನು ಮಂಗಳೂರಿನಿಂದ ಕರೆದುಕೊಂಡು ಹೋಗಲಿದೆ. ಬುಧವಾರ 130 ಯಾತ್ರಿಕರು ಹಜ್ಗೆ ತೆರಳಿದ್ದಾರೆ. [ಚಿತ್ರ, ಮಾಹಿತಿ : ಕರ್ನಾಟಕ ವಾರ್ತೆ]
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications