ಮೊಹಿಯುದ್ದೀನ್ ಬಾವ ಪರ ಪ್ರಚಾರಕ್ಕೆ ಎಚ್‌ಡಿ ದೇವೇಗೌಡ?

ಮಂಗಳೂರು, ಮೇ 1: ಮೇ 10 ರಂದು ನಡೆಯಲಿರುವ ಚುನಾವಣಾ ಪ್ರಚಾರದ ಭಾಗವಾಗಿ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಅಧ್ಯಕ್ಷ ಹೆಚ್ ಡಿ ದೇವೇಗೌಡರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿರುವ ಜೆಡಿಎಸ್‌ ಪಕ್ಷದ ಎಂಎಲ್ಸಿ ಬಿ ಎಂ ಫಾರೂಕ್, ಇತ್ತೀಚೆಗೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿರುವ ಪಕ್ಷದ ಅಭ್ಯರ್ಥಿ ಮೊಹಿಯುದ್ದೀನ್ ಬಾವಾ ಅವರ ಪರವಾಗಿ ಗೌಡರು ಮಂಗಳೂರು ಉತ್ತರ ಕ್ಷೇತ್ರದಲ್ಲಿ ಮತದಾರರನ್ನು ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

HD Deve Gowda to campaign for Mohiuddin Bava in Mangalore?

ಸುಂಕದಕಟ್ಟೆ ಅಂಬಿಕೆ ಅನ್ನಪೂರ್ಣೇಶ್ವರಿ ದೇವಸ್ಥಾನ, ಬಲವಂಡಿ ದೈವಸ್ಥಾನ ಮತ್ತು ಗುರುಪುರ ಕಂಬಳ ದರ್ಗಾಕ್ಕೂ ಜೆಡಿಎಸ್ ವರಿಷ್ಠರು ಭೇಟಿ ನೀಡಲಿದ್ದಾರೆ. ಗುರುಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 89ರ ಹರೆಯದ ಗೌಡರು ಮೇ 8ರಂದು ಪ್ರಚಾರ ಅಂತ್ಯಗೊಳ್ಳಲು ಕೆಲವೇ ದಿನಗಳು ಬಾಕಿ ಉಳಿದಿರುವಂತೆಯೇ ಮೇ 5 ರಂದು ರಾಜ್ಯಾದ್ಯಂತ ಸರಣಿ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಕೃಷ್ಣಾಪುರದಲ್ಲಿ ಫಾರೂಕ್ ಹೇಳಿದರು.

ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್‌ ಟಿಕೆಟ್‌ ತಪ್ಪಿದ್ದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೊಯಿದ್ದಿನ್ ಬಾವಾ ಕಾಂಗ್ರೆಸ್‌ ತೊರೆದು ಜೆಡಿಎಸ್‌ ಪಕ್ಷ ಸೇರ್ಪಡೆಯಾಗಿದ್ದರು. ಬಳಿಕ ತೀವ್ರ ಅಸಮಾಧಾನ ಹೊರಹಾಕಿದ್ದ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ವಿರುದ್ಧ ಕಿಡಿಕಾರಿದ್ದರು.

ಮೊಹಿಯುದ್ದೀನ್ ಬಾವಾ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್‌ ಉತ್ತರ ವಿಧಾನಸಭಾ ಕ್ಷೇತ್ರದಿಂದ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಿತ್ತು. ಇದರಿಂದ ಅಸಮಾಧಾನಗೊಂಡಿರುವ ಮೊಯಿದ್ದಿನ್ ಬಾವಾ ಕಾಂಗ್ರೆಸ್‌ ತೊರೆದು ಜೆಡಿಎಸ್ ಮೂಲಕ ಚುನಾವಣಾ ಕಣಕ್ಕಿಳಿಯಲು ನಿರ್ಧರಿಸಿದ್ದರು.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಮೊಹಿಯುದ್ದೀನ್ ಬಾವಾ, ಉತ್ತರದಲ್ಲಿ ಹನ್ನೊಂದು ಜನ ಆಕಾಂಕ್ಷಿಗಳು ಇದ್ದರು. ರಾಹುಲ್ ಗಾಂಧಿಯವರು ಕಳಿಸಿದ ಸರ್ವೇ ಟೀಂ ಆಧಾರದಲ್ಲಿ ಟಿಕೆಟ್ ನೀಡುವುದಾಗಿ ಹೇಳಿದ್ದರು. ಯಾವುದೇ ಪ್ರಭಾವ ಇಲ್ಲದೇ ಟಿಕೆಟ್ ಕೊಡುವುದಾಗಿ ಹೇಳಿದ್ದರು. ಆದರೆ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಿದ್ದಾರೆ. ಆರು ತಿಂಗಳ ಹಿಂದೆ ಜಿಲ್ಲೆಗೆ ಬಂದ ಗುತ್ತಿಗೆದಾರನಿಗೆ ಟಿಕೆಟ್ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+