ನನ್ನ ಮೇಲೆ ಕೆಟ್ಟ ದೃಷ್ಟಿ ಬಿದ್ದಿದೆ: ಎಚ್.ಡಿ. ಕುಮಾರಸ್ವಾಮಿ

Recommended Video

      ಯಾರ ಕೆಟ್ಟ ಕಣ್ಣು ಬಿತ್ತು ಕುಮಾರಣ್ಣನ ಮೇಲೆ..!? | Oneindia Kannada

      ಧರ್ಮಸ್ಥಳ, ಆಗಸ್ಟ್ 14: 'ಕೆಲವರ ಕೆಟ್ಟ ದೃಷ್ಟಿ ನನ್ನ ಮೇಲೆ ಬಿದ್ದಿದೆ. ಅದನ್ನು ಸರಿಪಡಿಸಿಕೊಳ್ಳಲು ದೇವರ ಮೊರೆ ಹೋಗುವುದು ಸಹಜ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

      72ನೇ ಸ್ವಾತಂತ್ರ್ಯ ದಿನಾಚರಣೆ 2018

      ಧರ್ಮಸ್ಥಳದಲ್ಲಿ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು ಮಂಗಳವಾರ ಬೆಳಿಗ್ಗೆ ಮಾಧ್ಯಮದವರ ಜತೆ ಮಾತನಾಡಿದರು.

      ಕೆಟ್ಟದೃಷ್ಟಿ ನಿವಾರಿಸಿಕೊಳ್ಳಲು ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸುತ್ತಿರುವುದಾಗಿ ಅವರು ಹೇಳಿದರು.

      ಧರ್ಮಸ್ಥಳದ ಪೂಜೆಯ ಬಳಿಕ ಅವರು ಕುಕ್ಕೆ ಸುಬ್ರಮಣ್ಯದಲ್ಲಿ ಪೂಜೆ ಸಲ್ಲಿಸಿ, ತುಲಾಭಾರ ಸೇವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

      hd kumaraswamy offered prayer in kukke subramanya

      ಆಶ್ಲೇಷ ಬಲಿ ಪೂಜೆ ನಡೆಸಿದ ಬಳಿಕ ಉಪಾಹಾರ ಸೇವಿಸಿ ಅವರು ಒಣದ್ರಾಕ್ಷಿಯ ತುಲಾಭಾರ ಸೇವೆ ಸಲ್ಲಿಸಲಿದ್ದಾರೆ.

      ಆಷಾಢ ಕಳೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಕುಮಾರಸ್ವಾಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಲು ಆರಂಭಿಸಿದ್ದಾರೆ.

      ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ, ಸೋಮವಾರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

      ಹಾಸನದ ಮೂಲಕ ಶಿರಾಡಿ ಮಾರ್ಗವಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ ಕುಮಾರಸ್ವಾಮಿ ದೇವಾಲಯಕ್ಕೆ ತೆರಳಿ ಮಂಜುನಾಥನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

      ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ದೇವೇಗೌಡರ ಪತ್ನಿ ಚೆನ್ನಮ್ಮ, ಅನಿತಾ ಕುಮಾರಸ್ವಾಮಿ ಅವರು ಮಂಜುನಾಥನ ಸನ್ನಿಧಿಯಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

      ಕುಕ್ಕೆ ಸುಬ್ರಮಣ್ಯದಲ್ಲಿ ಪೂಜೆ ಸಲ್ಲಿಸಿದ ನಂತರ ಕುಮಾರಸ್ವಾಮಿ ಮಧ್ಯಾಹ್ನ ಬೆಂಗಳೂರಿಗೆ ತೆರಳಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+