ಮಂಗಳವಾರ ಧರ್ಮಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ

Recommended Video

      ಇಂದು ಎಚ್ ಡಿ ಕುಮಾರಸ್ವಾಮಿ ಧರ್ಮಸ್ಥಳ ಹಾಗು ಶೃಂಗೇರಿಗೆ ಭೇಟಿ | Oneindia Kannada

      ಮಂಗಳೂರು, ಮೇ 21 : ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ದೇವಾಲಯಗಳ ಭೇಟಿ ಮಂಗಳವಾರವೂ ಮುಂದುವರೆಯಲಿದೆ. ಧರ್ಮಸ್ಥಳ ಮತ್ತು ಶೃಂಗೇರಿಗೆ ಅವರು ಭೇಟಿ ನೀಡಲಿದ್ದಾರೆ.

      ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಬೆಳಗ್ಗೆ 7.30ಕ್ಕೆ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಎಚ್.ಡಿ.ದೇವೇಗೌಡ, ಬಿ.ಎಂ.ಫಾರೂಕ್ ಅವರು ಕುಮಾರಸ್ವಾಮಿ ಅವರ ಜೊತೆಗೆ ಆಗಮಿಸಲಿದ್ದಾರೆ.

      ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಹಮ್ಮದ್ ಕುಂಜಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿದ ಬಳಿಕ ಜಿಲ್ಲೆಯ ಕಾರ್ಯಕರ್ತರ ಜೊತೆ ಅವರು ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

      kumaraswamy

      ಶ್ರೀ ಮಂಜುನಾಥ ಸ್ವಾಮಿಯ ದರ್ಶನದ ಬಳಿಕ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ದೇವೇಗೌಡರು ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಮೇ 23ರಂದು ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

      ಸೋಮವಾರವೂ ಎಚ್.ಡಿ.ಕುಮಾರಸ್ವಾಮಿ ಅವರು ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದರು. ಹಾಸನ ಜಿಲ್ಲೆಯ ಹೊಳೆನರಸೀಪುರದ ಲಕ್ಷ್ಮೀ ನರಸಿಂಹ ದೇವಾಲಯಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆ ಅವರು ಭೇಟಿ ನೀಡಿದ್ದರು.

      ಶೃಂಗೇರಿ ದೇವಾಲಯ, ಮಠದ ಭಕ್ತರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಳ್ಳುವ ಮೊದಲು ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಬುಧವಾರ ಸಂಜೆ 4.30ಕ್ಕೆ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+