Breaking: ಮಸೂದ್, ಪ್ರವೀಣ್ ನೆಟ್ಟಾರು ಮನೆಗೆ ಎಚ್‌ಡಿಕೆ ಭೇಟಿ

ಮಂಗಳೂರು, ಆ.01: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಯಾಗಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಮೊಹಮ್ಮದ್ ಫಾಜಿಲ್ ಮನೆಗಳಿಗೆ ಸೋಮವಾರ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿ ನೀಡಿದರು. ದುಃಖತಪ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ ಧಾವಿಸಿದರು. ಈ ಸಂದರ್ಭದಲ್ಲಿ ಪ್ರವೀಣ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಪ್ರವೀಣ್ ಪತ್ನಿ ನೂತನ ಹಾಗೂ ಅವರ ತಂದೆ-ತಾಯಿಗೆ ಜೊತೆ ಮಾತುಕತೆ ನಡೆಸಿದರು.

Recommended Video

      HD Kumaraswamy ಇಂದು ಸಾವಿನ ಮನೆಗೆ ಭೇಟಿ ನೀಡಿದರು | *Politics | OneIndia Kannada

      ಯಾವುದೇ ಕಾರಣಕ್ಕೂ ಎದೆಗುಂದಬೇಡಿ. ನಿಮ್ಮ ಕುಟುಂಬಕ್ಕೆ ನ್ಯಾಯ ಸಿಗುವ ದೊರೆಯುವ ರೀತಿಯಲ್ಲಿ ನಾನು ಹೋರಾಟ ಮಾಡುತ್ತೇನೆ ಎಂದು ಎಚ್. ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಪ್ರವೀಣ್ ಪತ್ನಿ ನೂತನ ಅವರು, ನನ್ನ ಪತಿಯನ್ನು ಕೊಂದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಕುಮಾರಸ್ವಾಮಿ ಬಳಿ ಕಣ್ಣೀರಿಟ್ಟರು.

      HD Kumaraswamy visits the youth houses who killed in Mangaluru

      ಇನ್ನು ಬೆಳ್ಳಾರೆಯಲ್ಲೇ ಹತ್ಯೆಯಾಗಿದ್ದ ಮಸೂದ್ ಅವರ ಕಳಂಜದ ನಿವಾಸಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದರು. ಮನೆಯಲ್ಲಿದ್ದ ಮಸೂದ್ ಅವರ ಚಿಕ್ಕಪ್ಪ ಹಾಗೂ ಆ ಯುವಕನ ಅಣ್ಣ ತಮ್ಮನೂ ಸೇರಿ ಇಡೀ ಕುಟುಂಬಕ್ಕೆ ಸಾಂತ್ವನ ಹೇಳಿದರು.

      ಬಳಿಕ ಮಾಜಿ ಮುಖ್ಯಮಂತ್ರಿಗಳು ಸುರತ್ಕಲ್ ನಲ್ಲಿ ಹತ್ಯೆಯಾದ ಮುಹಮ್ಮದ್ ಫಾಜಿಲ್ ಅವರ ಮನೆಗೂ ಭೇಟಿ ನೀಡಿ ಅವರ ತಂದೆ ತಾಯಿ ಹಾಗೂ ಕುಟುಂಬಕ್ಕೆ ಸಾಂತ್ವನ ಹೇಳಿದರು.

      ಈ ವೇಳೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ. ಎಂ. ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ. ಎಂ. ಫಾರೂಕ್, ಭೋಜೆಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+