ದೀಪಕ್ ಹತ್ಯೆ: ಕುಮಾರಸ್ವಾಮಿ, ಮೊಯಿದ್ದಿನ್ ಬಾವಾ ತನಿಖೆಗೆ ಒತ್ತಾಯ
ಮಂಗಳೂರು, ಜನವರಿ 8: ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಸ್ಥಳೀಯ ಕಾರ್ಪೋರೇಟರ್ ಕೈವಾಡ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಹೇಳಿಕೆಗೆ ಬಿಜೆಪಿ ತೀರ್ವ ವಿರೋಧ ವ್ಯಕ್ತಪಡಿಸಿದೆ.
ಈ ಕುರಿತು ಮಂಗಳೂರಿನಲ್ಲಿ ಸೋಮವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಡಾ. ಭರತ್ ಶೆಟ್ಟಿ, "ದೀಪಕ್ ರಾವ್ ಹತ್ಯೆ ವಿಚಾರದಲ್ಲಿ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವ ಕುಮಾರಸ್ವಾಮಿ ಹಾಗೂ ಶಾಸಕ ಮೊಯಿದ್ದಿನ್ ಬಾವಾ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಮೊಯಿದ್ದಿನ್ ಬಾವಾ ಜೆಡಿಎಸ್ ನಲ್ಲಿರುವ ತಮ್ಮ ಸಹೋದರನ ಮೂಲಕ ಕುಮಾರಸ್ವಾಮಿ ಅವರಿಂದ ಈ ಹೇಳಿಕೆ ಕೊಡಿಸಿದ್ದಾರೆ ಎಂದು ಅವರು ಆರೋಪಿಸಿದರು.

ಕುಮಾರಸ್ವಾಮಿ ಅವರಿಂದ ದೀಪಕ್ ಹತ್ಯೆ ಪ್ರಕರಣದ ತನಿಖೆಯ ಹಾದಿ ತಪ್ಪಿಸುವ ಕೆಲಸವಾಗುತ್ತಿದೆ ಎಂದು ದೂರಿದ ಅವರು ಕುಮಾರಸ್ವಾಮಿ ಹೇಳಿಕೆ ಸತ್ಯಕ್ಕೆ ದೂರವಾದದ್ದು, ಪ್ರಕರಣದ ಬಗ್ಗೆ ನ್ಯಾಯಯುವತಾದ ತನಿಖೆ ನಡೆದು ಸತ್ಯಾಂಶ ಹೊರಬರಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಎಚ್ ಡಿ ಕೆ ಕೊಲೆಗೆ ಸುಪಾರಿ ನೀಡಿದ್ದಾರೆ ಆರೋಪಿಸಿರುವ ಕಾರ್ಪೋರೇಟರ್ ತಿಲಕ್ ಚಂದ್ರ ಕೂಡ ಉಪಸ್ಥಿತರಿದ್ದರು.
ದೀಪಕ್ ಕೊಲೆಯಿಂದ ಸ್ಥಳೀಯ ಬಿಜೆಪಿ ಕಾರ್ಪೋರೆಟರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಅವರು ಸೋಮವಾರ ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದರು.












Click it and Unblock the Notifications