ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ
ಮಂಗಳೂರು, ಮೇ 15: ಮುಂದಿನ ಮೂರು ದಿನಗಳಲ್ಲಿ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಕರಾವಳಿಯಲ್ಲಿ "ಯಲ್ಲೋ ಅಲರ್ಟ್" ಘೋಷಿಸಿದೆ.

ಹವಾಮಾನ ಇಲಾಖೆಯ ಮಾಹಿತಿಯಂತೆ, ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ 64.5 ಮಿ.ಮೀ-115.5 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಿಡಿಲಿನೊಂದಿಗೆ ಗಾಳಿ ಕೂಡ ಹೆಚ್ಚಾಗಿರಲಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ನಿಮ್ಮ ಒತ್ತಡದ ಪರಿಣಾಮ ವಾಯುಭಾರ ಕುಸಿತ ಉಂಟಾಗಿದ್ದು, ಒಂದೆರಡು ದಿನಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.











Click it and Unblock the Notifications