ಭಾರೀ ಮಳೆಗೆ ತುಂಬಿ ಹರಿಯುತ್ತಿರುವ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ

ಮಂಗಳೂರು, ಜುಲೈ 19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ, ಮಳೆಗೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಸಂಪೂರ್ಣವಾಗಿ ಜಲಾವೃತವಾಗಿದ್ದು, ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು ನದಿಯ ಮೇಲ್ಭಾಗದಲ್ಲಿ ತೀರ್ಥ ಸ್ನಾನ ಪೂರೈಸುತ್ತಿದ್ದಾರೆ.

ಅಲ್ಲದೆ ಘಟ್ಟ ಪ್ರದೇಶದಲ್ಲಿ ಇದೇ ರೀತಿ ನಿರಂತರ ಮಳೆಯಾದರೆ ಕುಮಾರಧಾರಾ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಸೇತುವೆ ಮಟ್ಟದಲ್ಲಿ ನದಿ ನೀರು ಹರಿಯುತ್ತಿದೆ.

Heavy rain in Dakshina Kannada, water level increases in Kumaradhara river at Kukke Subramanya

ಕೊಲ್ಲಮೊಗ್ರು, ಕಲ್ಮಕಾರು, ಗುತ್ತಿಗಾರು, ಪಂಜ, ಬಳ್ಪ, ನಿಂತಿಕಲ್ ಮೊದಲಾದೆಡೆ ನಿರಂತರ ಮಳೆಯಾದುದರಿಂದ ಈ ಪರಿಸರದಲ್ಲಿ ಹರಿಯುವ ನದಿ, ತೊರೆಗಳು ತುಂಬಿ ಹರಿಯುತ್ತಿವೆ.

Heavy rain in Dakshina Kannada, water level increases in Kumaradhara river at Kukke Subramanya

ನದಿಗಳು ತುಂಬಿ ಹರಿಯುತ್ತಿರುವುದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ತೋಟಗಳಿಗೆ ನೀರು ನುಗ್ಗಿದ ಪರಿಣಾಮವಾಗಿ ಕೃಷಿಕರಿಗೆ ನಷ್ಟ ಉಂಟಾಗಿದೆ. ಎರಡು ದಿನಗಳಿಂದ ಸುರಿಯುತ್ತಿರುವ ಕುಂಭದ್ರೋಣ ಮಳೆಗೆ ಜನರು ತತ್ತರಿಸಿದ್ದಾರೆ. ದಕ್ಷಿಣಕನ್ನಡ, ಉಡುಪಿ ಹಾಗೂ ಕಾಸರಗೋಡಿನಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

Heavy rain in Dakshina Kannada, water level increases in Kumaradhara river at Kukke Subramanya

ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ಜೀವನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳಲ್ಲೂ ನೀರಿನ ಹರಿವು ಹೆಚ್ಚಾಗಿದ್ದು, ಮಳೆ ಹೀಗೇ ಮುಂದುವರಿದಲ್ಲಿ ನದಿ ಪಾತ್ರಗಳಲ್ಲಿ ನೆರೆಯ ಪರಿಸ್ಥಿತಿಯೂ ನಿರ್ಮಾಣವಾಗುವ ಸಾಧ್ಯತೆಯಿದೆ. ಮುಂದಿನ ಎರಡು ದಿನ ಮಳೆಯು ಇದೇ ರೀತಿಯಲ್ಲಿ ಮುಂದುವರಿಯಲಿದೆ ಎನ್ನುವ ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+