ಮಳೆಯ ಅಬ್ಬರ: ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು, ಜೂನ್‌ 28: ಬರದಿಂದ ತತ್ತರಿಸಿದ್ದ ಕರ್ನಾಟಕದಲ್ಲಿ ಇದೀಗ ವರುಣನ ಆರ್ಭಟ ಜೋರಾಗಿದೆ. ಕರಾವಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ವರುಣ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನ ತತ್ತರಿಸಿದ್ದಾರೆ. ನದಿ, ಹಳ್ಳ-ಕೆರೆಗಳು ತುಂಬಿ ಹರಿಯುತ್ತಿದ್ದು, ಇಂದು ಕೂಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಸೇರಿದಂತೆ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Heavy Rain Effect School And College Holiday Declared In Dakshina Kannada District

ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಬಗ್ಗೆ ಆದೇಶ ಹೊರಡಿಸಿದ್ದು, ಈ ಕೆಳಗಿನ ಅಂಶಗಳನ್ನು ಸಾರ್ವಜನಿಕರು ಗಮನಿಸಬೇಕಿದೆ.

1) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 28-06-2024 ರಂದು ರಜೆಯನ್ನು ಘೋಷಿಸಲಾಗಿದೆ.

2) ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

3) ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.

4) ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.

5) ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.

6) ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.

7) ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡುವುದು.

ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 / 0824-2442590 ದೂರವಾಣಿಯನ್ನು ಸಂಪರ್ಕಿಸಿ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+