ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ: ವರುಣಾರ್ಭಟಕ್ಕೆ ಇಬ್ಬರು ಬಲಿ

ಮಂಗಳೂರು, ಜುಲೈ 05: ರಾಜ್ಯದಲ್ಲಿ ಈವರೆಗೂ ಮುನಿಸಿಕೊಂಡಿದ್ದ ವರುಣ ಇದೀಗ ತನ್ನ ವಿರಾಟ ರೂಪ ತೋರಿಸುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸುತ್ತಿದ್ದಾನೆ. ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಕಳೆದೆರೆಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಅಲ್ಲಲ್ಲಿ ಮರಗಳು ಧರೆಗುರುಳಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜಲಾವೃತಗೊಂಡಿದ್ದು, ವಾಹನ ಸವಾರರು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಮಳೆಯ ಅವಾಂತರಗಳು ಮುಂದುವರಿದಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಮೊದಲ ಬಲಿಯಾಗಿದೆ.

Heavy Rain: First death Due To Monsoon Rain In Mangaluru

ಮಂಗಳೂರು ಹೊರವಲಯದ ಪಿಲಾರು ಎಂಬಲ್ಲಿ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ನೀರಿಗೆ ಬಿದ್ದು ಸುರೇಶ್‌ ಗಟ್ಟಿ (52) ಎನ್ನುವವರು ಮೃತಪಟ್ಟಿದ್ದಾರೆ. ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸುರೇಶ್ ಗಟ್ಟಿ ಅವರು ಮನೆ ಸಂಪರ್ಕದ ಕಾಲು ಸಂಕ ದಾಟುವ ವೇಳೆ ನೀರಿಗೆ ಬಿದ್ದಿದ್ದು, ಉಸಿರು ಗಟ್ಟಿ ಸಾವನಪ್ಪಿದ್ದಾರೆ ಎನ್ನಲಾಗಿದೆ.

ಇನ್ನು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತೆಕ್ಕಟ್ಟೆಯಲ್ಲಿ ಕೂಡ ಮಳೆಯ ಅವಾಂತರದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ದಿವಾಕರ್ ಶೆಟ್ಟಿ ಮೃತ ದುರ್ದೈವಿ. ನಿನ್ನೆ ತಡರಾತ್ರಿ ಹೋಟೆಲ್‌ ಕೆಲಸ ಮುಗಿಸಿ ಮನೆಗೆ ತೆರಳುವ ವೇಳೆ ಬೈಕ್‌ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಮುಳುಗು ತಜ್ಞ ಈಶ್ವರಮಲ್ಪೆ ಮೃತದೇಹ ಮೇಲೆತ್ತುವ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Heavy Rain: First death Due To Monsoon Rain In Mangaluru

ಇನ್ನು ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 05 ರಂದು ಬೆಳಗ್ಗೆ 8.30 ಗಂಟೆಯವರೆಗೆ ಭಾರೀ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಮಾಹಿತಿ ನೀಡಿದ್ದು, ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತ ಕ್ರಮವಾಗಿ ಜುಲೈ 5ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ಈ ಪ್ರದೇಶಗಳ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+