Heavy Rain: ವಾಯುಭಾರ ಕುಸಿತ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ
ಮಂಗಳೂರು, ಡಿಸೆಂಬರ್ 04: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ಬುಧವಾರ ಮಧ್ಯರಾತ್ರಿಯಿಂದ ಬೆಳಗ್ಗಿನ ಜಾವದವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಉತ್ತಮ ಮಳೆಯಾಗಿದೆ. ಬುಧವಾರ ದಿನವಿಡೀ ಜಿಲ್ಲೆಯಲ್ಲಿ ಮೋಡ ಮುಸಿಕಿದ ವಾತಾವರಣ ಕಂಡು ಬಂದಿತ್ತು. ಇಂದು ಬೆಳಗ್ಗೆಯೂ ಮಳೆಯ ತುಂತುರು ಹನಿ ಸುರಿಯುತ್ತಿದೆ.
ಅರಬ್ಬಿ ಸಮುದ್ರ ಮಟ್ಟದಲ್ಲಿ ವಾಯಭಾರ ಕುಸಿತವಾಗಿದೆ. ಪರಿಣಾಮ ಆಗ್ನೇಯ ಅರಬ್ಬಿ ಸಮುದ್ರ ಮಟ್ಟದಿಂದ 5.8 ಕಿ.ಮೀ. ಎತ್ತರದಲ್ಲಿ ಸುಳಿಗಾಳಿ ಸೃಷ್ಟಿಯಾಗಿದೆ. ಇದರಿಂದ ನಿಮ್ನ ಒತ್ತಡ ನಿರ್ಮಾಣಗೊಂಡು ಕರಾವಳಿ ಭಾಗದಲ್ಲಿ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ವಿದ್ಯುತ್ ಕೈಕೊಟ್ಟಿದೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣವಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ, ಶಿವಮೊಗ್ಗ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಲಘು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಕಟನೆ ತಿಳಿಸಿದೆ.
ಸಮುದ್ರ ಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಗ್ನೇಯ ಅರಬ್ಬೀ ಸಮುದ್ರದ ಸಮುದ್ರ ಮಟ್ಟದಿಂದ 5.8 ಕೀಮಿ ಎತ್ತರದಲ್ಲಿ ಸುಳಿಗಾಳು ಸೃಷ್ಠಿಯಾಗಿದೆ..ಈ ಹಿನ್ನಲೆ ಯಲ್ಲಿ ಇನ್ನೂ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ
ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸಂಕಟ ತಂದಿದೆ. ಗ್ರಾಮೀಣ ಭಾಗದ ಕೃಷಿಕರ ಕೊಯಿಲಿನ ಅಡಿಕೆ ಅಂಗಳದಲ್ಲೇ ಇದ್ದು, ಅಡಿಕೆ ಮಳೆಗೆ ಒದ್ದೆಯಾಗಿದೆ. ಇದರಿಂದ ಅಡಿಕೆಯ ಗುಣಮಟ್ಟವೂ ಹಾಳಾಗಲಿದೆ. ಅಡಿಕೆ ಮರದಲ್ಲಿ ಹಿಂಗಾರವೂ ಬೆಳವಣಿಗೆ ಹಂತದಲ್ಲಿರುವುದರಿಂದ ಅಕಾಲಿಕ ಮಳೆ ಹಿಂಗಾರದ ಬೆಳವಣಿಗೆಗೂ ಕುತ್ತುತಂದಿದೆ. ಇನ್ನುಳಿದಂತೆ ಕಾಳುಮೆಣಸು ಬಳ್ಳಿಗೂ ಈ ಮಳೆ ಶುಭವಲ್ಲ ಅನ್ನೋದು ಕೃಷಿಕರ ಮಾತಾಗಿದೆ.

ಗುರುವಾರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆಯಾಗಿದೆ. ಹವಾಮಾನ ಇಲಾಖೆಯ ಸೂಚನೆಯ ಪ್ರಕಾರ ಕರಾವಳಿ ಜಿಲ್ಲೆಯ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಈ ವಾತವರಣ ಮುಂದಿನ ಐದು ದಿನಗಳ ಕಾಲ ವಿಸ್ತರಣೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇನ್ನು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿಯೂ ಮಳೆಯಾಗಿದೆ. ನಿನ್ನೆ ಜಿಲ್ಲೆಯಾದ್ಯಂತ ಮೋಡ ಮುಸುಗಿದ ವಾತಾವರಣವಿದ್ದು, ಸಂಜೆ ಮಳೆ ಆರಂಭವಾಗಿದೆ. ರಾತ್ರಿ ಪೂರ್ತಿ ಸುರಿದ ಮಳೆ ಬೆಳಗಿನ ಜಾವ ಕೊಂಚ ಕಡಿಮೆಯಾಗಿದೆ. ಏಕಾಏಕಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ.












Click it and Unblock the Notifications