• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕರಾವಳಿಯಲ್ಲಿ ಭಾರೀ ಮಳೆ, ತುಂಬಿಹೋಗುತ್ತಿವೆ ತಗ್ಗು ಪ್ರದೇಶಗಳು

|

ಮಂಗಳೂರು ಆಗಸ್ಟ್ 8: ಕರಾವಳಿಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ ಮತ್ತೆ ಭಾರೀ ಮಳೆಯಾಗುವ ಸೂಚನೆ ನೀಡಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ವರ್ಷಾಧಾರೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತೆ ಶಾಲೆ-ಕಾಲೇಜಿಗೆ ಇಂದು ಕೂಡ ರಜೆ ನೀಡಿದ್ದಾರೆ.

ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಶಿಶಿಲ ಗ್ರಾಮದ ಶಿಶಿಲೇಶ್ವರ ದೇವಳದ ಸಮೀಪ ಹರಿಯುತ್ತಿರುವ ಕಪಿಲಾ ನದಿಯಲ್ಲಿ ಪ್ರವಾಹ ಅಧಿಕವಾಗಿದ್ದು ನದಿಯಲ್ಲಿ ಬೃಹತ್ ಎರಡು ಮರಗಳು ನೀರಿನಲ್ಲಿ ಬಂದು ಕಿಂಡಿ ಅಣೆಕಟ್ಟಿಗೆ ಸಿಲುಕಿ ಕೃತಕ ಪ್ರವಾಹ ಉಂಟಾಗಿ ಶಿಶಿಲ ದೇವಳ ದ್ವೀಪದಂತಾಗಿದೆ. ನೆರೆಯಲ್ಲಿ ಬಂದ ಮರಗಳು ಸಿಲುಕಿ ಸೇತುವೆ ಸನಿಹದಲ್ಲಿ ದೇವಳಕ್ಕೆ ಹೋಗಲು ಇದ್ದ ರಸ್ತೆ ಪೂರ್ತಿ ನೀರಿನಲ್ಲಿ ಕೊಚ್ಚಿ ಹೋಗಿದೆ.

ಉತ್ತರ ಕನ್ನಡಕ್ಕೆ ಮೂರು ದಿನ ಯಾರೂ ಬರಲೇಬೇಡಿ; ಡಿಸಿ ಸೂಚನೆ

ಸ್ಥಳೀಯರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಪ್ರಯಾಸದಲ್ಲಿ ಕೊಚ್ಚಿಹೋದ ರಸ್ತೆಯ ಮೇಲೆ ಹಿಟಾಚಿಯನ್ನು ಸಾಗಿಸಿ ಕಿಂಡಿ ಅಣೆಕಟ್ಟಿನ ಮೇಲೆ ಈ ಹಿಟಾಚಿ ಮೂಲಕ ಅಣೆಕಟ್ಟಿನಲ್ಲಿ ಸಿಲುಕಿರುವ ಮರಗಳನ್ನು ತೆರವು ಗೊಳಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಾಣದ ಹಂಗನ್ನು ತೊರೆದು ಹಿಟಾಚಿ ಚಾಲಕ ಕಿಂಡಿ ಅಣೆಕಟ್ಟಿನ ಮೇಲೆ ಹಿಟಾಚಿ ನಿಲ್ಲಿಸಿ ಈ ಸಿಲುಕಿದ ಮರಗಳನ್ನು ತೆಗೆಯುವ ಸಂದರ್ಭ ಹಲವು ಬಾರಿ ಹಿಟಾಚಿಯೇ ಮರದ ಭಾರಕ್ಕೆ ನದಿಯತ್ತ ವಾಲುವಂತಾಗಿದ್ದರೂ, ಚಾಲಕನ ಧೈರ್ಯದ ಕಾರ್ಯದಿಂದ ಬಹುತೇಕ ದೊಡ್ಡ ಮರಗಳ ಕಾಂಡಗಳನ್ನ ತೆರವುಗೊಳಿಸಿದ್ದಾರೆ.

ವಿಪರೀತ ಮಳೆಯಿಂದಾಗಿ ಶಿಶಿಲದಲ್ಲಿ ವಿದ್ಯುತ್, ದೂರವಾಣಿ ಪೂರ್ತಿ ಕೆಟ್ಟು ಹೋಗಿದ್ದು ಪ್ರವಾಹವೂ ಸೇರಿದಂತೆ ದೇವಳದ ಸಮೀಪ ಸುತ್ತಮುತ್ತಲಿನ ಪ್ರದೇಶ ಅಕ್ಷರಶಃ ದ್ವೀಪದಂತಾಗಿದೆ. ದೇವಳದ ಸಮೀಪದಲ್ಲೆ ಇರುವ ತೂಗುಸೇತುವೆಗೂ ಈ ನೆರೆಯಲ್ಲಿ ಬಂದ ಮರಗಳು ಡಿಕ್ಕಿಯಾಗಿ ಸ್ವಲ್ಪ ಪ್ರಮಾಣದ ಹಾನಿಯಾಗಿದೆ.

In Pics: ಕರ್ನಾಟಕದಲ್ಲಿ ಮಹಾ ಮಳೆ

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ,ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಸುಬ್ರಹ್ಮಣ್ಯ ಕುಲ್ಕುಂದದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ಸಂಕಷ್ಟ ಎದುರಾಗಿದೆ. ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ.

ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಇನ್ನಷ್ಟೇ ಆಗಬೇಕಿದೆ. ನದಿ ಪಾತ್ರದ ತೋಟ ಹಾಗು ಕೃಷಿ ಪ್ರದೇಶಕ್ಕೂ ನದಿ ನೀರು ನುಗ್ಗಿದೆ. ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ಚರ ರಾಜ್ಯ ಹೆದ್ದಾರಿಗು ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.

English summary
Heavy rain in Dakshina Kannada and Western Ghat area river Nethravathi and Kaumaradhara go in full spate. Flood situation created in Netharavathi nad Kumaradhara river bank,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X