ಶಿರಾಡಿ ಘಾಟ್ ನಲ್ಲಿ ಭಾರೀ ಮಳೆ, ಉರುಳಿಬಿದ್ದ ಮರ

ಮಂಗಳೂರು, ಜೂನ್ 26 : ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯ ಗಡಿಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಶಿರಾಡಿ ಘಾಟ್ ನಲ್ಲಿ ರೈಲ್ವೇ ಕಂಬಿ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿರುವುದರಿಂದ ರೈಲು ಸಂಚಾರಕ್ಕೆ ತೊಡಕಾಗಿದೆ.

ಇದರಿಂದಾಗಿ ಮಂಗಳೂರು-ಬೆಂಗಳೂರು ರೈಲ್ವೇ ಸಂಚಾರದಲ್ಲಿ ವ್ಯತ್ಯಯವಾಗಿದೆ. ಮಂಗಳೂರು-ಬೆಂಗಳೂರು ಹಗಲು ರೈಲು ಸುಮಾರು 5 ಗಂಟೆ ತಡವಾಗಿ ಆಗಮಿಸಲಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Heavy rain in Mangaluru-Hassan : Tree falls on railway track

ಪುತ್ತೂರು ತಾಲೂಕಿನ ಸಿರಿಬಾಗಿಲಿನಲ್ಲಿ ರೈಲ್ವೇ ಹಳಿಯ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಇದರಿಂದಾಗಿ ಹಗಲು ಸಂಚರಿಸುವ ಎರಡು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಿದೆ.

ಮಂಗಳೂರಿನಿಂದ ಬೆಳಗ್ಗೆ 11.00 ಹೊರಟ ರೈಲು ಸುಬ್ರಹ್ಮಣ್ಯದಿಂದ 6.30ಕ್ಕೆ ತನ್ನ ಪಯಣವನ್ನು ಮುಂದುವರಿಸಲಿದೆ. ಬೆಂಗಳೂರಿನಿಂದ ಬರುತ್ತಿರುವ ಕಾರವಾರ ರೈಲು 8.30ರ ಹೊತ್ತಿಗೆ ಮಂಗಳೂರು ಜಂಕ್ಷನ್ ತಲಪಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+