ಮಳೆರಾಯನ ಆರ್ಭಟದಿಂದ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ, ಭಕ್ತರಿಗೆ ಪ್ರಮುಖ ಸಂದೇಶಗಳು
ಮಂಗಳೂರು, ಜುಲೈ, 23: ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅನಾಹುತಗಳೇ ಸೃಷ್ಟಿಯಾಗಿವೆ.
ಇಂದು ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆರಾಯ ಅಬ್ಬರಿಸಿ ಬೊಬ್ಬೆರೆಯುತ್ತಿದ್ದು, ಹಲವೆಡೆ ತಗ್ಗು ಪ್ರದೇಶಗಳು ಮುಳುಗಡೆ ಆಗುತ್ತಿವೆ. ಅದರಲ್ಲೂ ನೇತ್ರಾವತಿ ನದಿ ಮಟ್ಟ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಕುಮಾರಧಾರಾ ನದಿಯೂ ಕೆಲಕಡೆಗಳಲ್ಲಿ ಉಕ್ಕಿ ಹರಿಯಲು ಆರಂಭಿಸಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಲದಿಗ್ಬಂಧನವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾತ್ತಿದೆ. ಅಲ್ಲದೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಅಲ್ಲದೆ ದೇವಸ್ಥಾನದ ಪಕ್ಕದ ರಸ್ತೆಗಳೂ ಜಲಾವೃತವಾಗಿವೆ. ಈ ಹಿನ್ನೆಲೆ ನದಿ ಪ್ರದೇಶಗಳಿಗೆ ಹೋಗದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಪೊಲೀಸ್, ಗೃಹರಕ್ಷಕದಳದವರು ಸ್ನಾನಘಟ್ಟದ ಬಳಿ ಬೀಡುಬಿಟ್ಟಿದ್ದಾರೆ.
ಕುಕ್ಕೆ ಸಂಪರ್ಕಿಸುವ ಶಿರಾಡಿ ಘಾಟಿ ಹೆದ್ದಾರಿ ಮತ್ತು ಪುತ್ತೂರು, ಮಂಗಳೂರು ಕಡೆಯಿಂದ ಸಂಪರ್ಕ ಕಲ್ಪಿಸುವ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಸಹ ಜಲಾವೃತವಾಗಿದೆ. ಶನಿವಾರ ಮತ್ತು ಭಾನುವಾರವಾದ ಹಿನ್ನೆಲೆ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಿಮಿಸಿದ್ದಾರೆ. ಆದ್ದರಿಂದ ಬಂದಂತಹ ಭಕ್ತರನ್ನು ನಿಭಾಯಿಸುವಲ್ಲಿ ಎನ್‌ಡಿಆರ್‌ಎಫ್ ತಂಡ ಹರಸಾಹಸಪಡುತ್ತಿದೆ.












Click it and Unblock the Notifications