ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರಿ ಮಳೆ: ಮಂಗಳೂರು ವಿವಿ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 20: ಕರಾವಳಿ ಜಿಲ್ಲೆಗಳಾದ ಮಂಗಳೂರು ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಮಂಗಳೂರು ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಮೊಮ್ಮಕ್ಕಳ ಅಪ್ಪಿ ಹಿಡಿದು ಅಜ್ಜಿಯ ಅಭಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ: ಮೊಮ್ಮಕ್ಕಳ ಅಪ್ಪಿ ಹಿಡಿದು ಅಜ್ಜಿಯ ಅಭಯ

ಸೆ.21 ರಿಂದ ಆರಂಭವಾಗಬೇಕಿದ್ದ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಿ ಮಂಗಳೂರು ವಿವಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

Heavy Rain: Mangaluru University Postgraduate Exams Postponed

ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು, ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ವಿಪರೀತ ಗಾಳಿ, ಮಳೆ ಬೀಸುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ವಿವಿಯು ದಿನಾಂಕ 21-09-2020 ರಂದು ನಿಗದಿಪಡಿಸಿದ್ದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Heavy Rain: Mangaluru University Postgraduate Exams Postponed

ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿಯೇ ನಿಗದಿ ಪಡಿಸಲಾಗುವುದು. ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

English summary
Due to heavy rains in the coastal districts of Mangaluru and Udupi, Graduate, Post Graduate examinations of Mangaluru University have been temporarily postponed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X