ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆ ಎಚ್ಚರಿಕೆ; ರೆಡ್ ಅಲರ್ಟ್

ಮಂಗಳೂರು, ಆಗಸ್ಟ್ 04 : ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂಗಾರು ಮತ್ತಷ್ಟು ಚುರುಕಾಗಲಿದೆ. ಆಗಸ್ಟ್ 5ರ ತನಕ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮಂಗಳವಾರ ಸಹ ಹೆಚ್ಚು ಮಳೆಯಾಗುತ್ತಿದೆ.

Recommended Video

      DK Shivakumar : ಫೀಲ್ಡಿಗಿಳಿದು ಗೆದ್ದರಷ್ಟೇ ಪದಾಧಿಕಾರಿ ಹುದ್ದೆ | Oneindia Kannada

      ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ. 115 ರಿಂದ 204 ಮಿ. ಮೀ. ತನಕ ಮಳೆ ಸುರಿಯಲಿದೆ ಎಂದು ಅಂದಾಜಿಸಲಾಗಿದೆ.

      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಮಳೆ ಸುರಿಯುತ್ತಿದೆ. ಇದರಿಂದಾಗಿ ಅಪಾರವಾದ ಹಾನಿಯಾಗಿದೆ. ಕಡಲ ತೀರದಲ್ಲಿ ಅಲೆಗಳ ಅಬ್ಬರೂ ಹೆಚ್ಚಿದೆ. ಮಳೆಯ ಜೊತೆ ಭಾರಿ ಗಾಳಿ ಬೀಸುತ್ತಿದ್ದು, ಜನರು ಆತಂಕಗೊಂಡಿದ್ದಾರೆ.

      Heavy Rain Red Alert In Karnataka Karavali

      ಮಂಗಳವಾರ ಇಡೀ ದಿನ ಮಳೆ ಸುರಿದಿದೆ. ಇದರಿಂದಾಗಿ ಜನ ಜೀವನ ಬಹುತೇಕ ಅಸ್ತವ್ಯಸ್ತವಾಗಿದೆ. ಮಂಗಳೂರಿನ ಬೋಳೂರಿನಲ್ಲಿ ಮರ ಮತ್ತು 4 ವಿದ್ಯುತ್ ಕಂಬ ಧರೆಗುರುಳಿದೆ. ಕೆಲವು ಕಡೆ ಗುಡ್ಡ ಕುಸಿದ ವರದಿಗಳು ಬಂದಿವೆ.

      ಚಾರ್ಮಾಡಿ ಘಾಟ್‌ನ ವಿವಿಧ ಪ್ರದೇಶಗಳಲ್ಲಿ ಮಣ್ಣು ಕುಸಿದಿದೆ. ಬೆಳ್ತಂಗಡಿಯಲ್ಲಿ ವಾಹನದ ಮೇಲೆ ವಿದ್ಯುತ್ ಕಂಬವೊಂದು ಬಿದ್ದಿದೆ. ನದಿ ಪಾತ್ರದ ತಗ್ಗು ಪ್ರದೇಶದಲ್ಲಿ ನೆರೆ ಭೀತಿ ಸೃಷ್ಟಿಯಾಗಿದೆ.

      ಮಂಗಳವಾರ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 22 ಸೆಂ. ಮೀ. ಮಳೆಯಾಗಿದೆ. ಕಾರ್ಕಳ, ಧರ್ಮಸ್ಥಳದಲ್ಲಿ 8, ಸುಬ್ರಮಣ್ಯ, ಸುಳ್ಯ, ಕುಂದಾಪುರದಲ್ಲಿ 7 ಸೆಂ. ಮೀ. ಮಳೆಯಾಗಿದೆ.

      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದಾಗಿ ಯಾವುದೇ ತೊಂದರೆಯಾದರೆ 1077 ಉಚಿತ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಜಿಲ್ಲಾಡಳಿತ ಹೇಳಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+