ಸಿಎಂ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲು ತಡೆ ನೀಡಿದ ಮಹಾಮಳೆ

ಮಂಗಳೂರು, ಆಗಸ್ಟ್.14: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲಾ ಪ್ರಮುಖ ಸಂಪರ್ಕ ರಸ್ತೆಗಳು ಬಂದ್ ಆಗಿವೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಉದನೆ ಬಳಿ ಗುಂಡ್ಯಾ ಹೊಳೆಯು ತುಂಬಿ ರಸ್ತೆಯಲ್ಲೇ ಹರಿದ ಪರಿಣಾಮ ಹೆದ್ದಾರಿ ಬಂದ್ ಮಾಡಲಾಗಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಸ್ತೆಯ ಹೊಸ್ಮಠ ಸೇತುವೆಯು ಕಳೆದ ಎರಡು ದಿನಗಳಿಂದ ನಿರಂತರವಾಗಿ ಮುಳುಗಡೆಯಾದ ಪರಿಣಾಮ ವಾಹನ ಸಂಚಾರ ಸ್ಥಗಿತಗೊಂಡಿದೆ.

ಮಾಣಿ- ಮೈಸೂರು ರಾಜ್ಯ ಹೆದ್ದಾರಿ ಕೊಡಗು ಜಿಲ್ಲೆಯ ಕಾರ್ತೋಜೆ ಬಳಿ ರಸ್ತೆಗೆ ಗುಡ್ಡ ಕುಸಿದ ಪರಿಣಾಮ ಆ ರಸ್ತೆಯಲ್ಲೂ ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ ಹೇರಲಾಗಿದೆ.

Heavy rainfall continues throughout the coastal district

ಈ ನಡುವೆ ಮಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಭೇಟಿಗೂ ಕೊಂಚ ತಡೆ ನೀಡಿದೆ. ಉದನೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಹಿನ್ನೆಲೆಯಲ್ಲಿ ಗುಂಡ್ಯಾ-ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ.

72ನೇ ಸ್ವಾತಂತ್ರ್ಯ ದಿನಾಚರಣೆ 2018

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಸ್ತೆಯೂ ಮಳೆಯಿಂದಾಗಿ ಮುಚ್ಚಿದೆ‌. ಈ ನಡುವೆ ಪುತ್ತೂರು-ಸುಬ್ರಹ್ಮಣ್ಯ ರಸ್ತೆಯ ಕುಮಾರಧಾರಾ ಸ್ನಾನಘಟ್ಟದ ಬಳಿಯೂ ರಸ್ತೆಗೆ ನೀರು ನುಗ್ಗಿದ ಪರಿಣಾಮ ಸದ್ಯಕ್ಕೆ ಆ ರಸ್ತೆಯೂ ಬ್ಲಾಕ್ ಆಗಿದೆ.

Heavy rainfall continues throughout the coastal district

ಇದೀಗ ಮುಖ್ಯಮಂತ್ರಿಗಳು ಉಪ್ಪಿನಂಗಡಿ-ಪುತ್ತೂರು-ಬೆಳ್ಳಾರೆ-ಗುತ್ತಿಗಾರು ಮಾರ್ಗವಾಗಿ ಸುಬ್ರಹ್ಮಣ್ಯ ಕ್ಕೆ ಸುತ್ತು ಬರಬೇಕಾದಂತಹ ಸ್ಥಿತಿಯ ನಿರ್ಮಾಣವಾಗುವ ಮೂಲಕ ಮುಖ್ಯಮಂತ್ರಿಗಳಿಗೆ ಜಲದಿಗ್ಬಂದನ ಉಂಟಾದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+