ಮಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ: ಆತಂಕಗೊಂಡ ಜನ
ಮಂಗಳೂರು, ಅಕ್ಟೋಬರ್. 04: ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಲ್ಲಿ ಇಂದು (ಅ.04)ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಸುರಿಯಲು ಆರಂಭಿಸಿದೆ.
ಮಂಗಳೂರಿನಾದ್ಯಂತ ಭಾರೀ ಸಿಡಿಲು ಸಹಿತ ನಿರಂತರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ನಗರದೆಲ್ಲೆಡೆ ಕತ್ತಲೆ ಆವರಿಸಿದ್ದು, ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿಯುತ್ತಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲಭಾಗದಲ್ಲಿ ಕಳೆದ ರಾತ್ರಿ ಉತ್ತಮ ಮಳೆಯಾಗಿತ್ತು. ಮಂಗಳೂರು ನಗರದ ಹೊರಭಾಗದಲ್ಲಿ ನಿನ್ನೆ ಸಂಜೆ ಗುಡುಗು ಸಹಿತ ಮಳೆ ಸುರಿದಿತ್ತು. ಇಂದು ಮಧ್ಯಾಹ್ನದಿಂದ ದಕ್ಷಿಣ ಕನ್ನಡ ಬಂಟ್ವಾಳ, ಪುತ್ತೂರು , ಉಪ್ಪಿನಂಗಡಿ , ಧರ್ಮಸ್ಥಳ, ಗುರುವಾಯನ ಕೆರೆ , ಸುಬ್ರಹ್ಮಣ್ಯ , ಸುಳ್ಯ ದಲ್ಲಿ ಸಿಡುಲು ಸಹಿತ ಭಾರೀ ಮಳೆ ಸುರಿದಿದೆ.

ಗುಡುಗು ಸಿಡಿಲಿನ ಆರ್ಭಟಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯು ಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದು ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ .
ಈ ಹಿನ್ನೆಲೆಯಲ್ಲಿ ಅಕ್ಟೋಬರ್. 5ರ ಬಳಿಕ ಕರಾವಳಿಯಲ್ಲಿ ಭಾರೀ ಮಳೆ ಸುರಿಯುವ ಎಚ್ಚರಿಕೆ ರವಾನಿಸಲಾಗಿದೆ. ಆದರೆ ಈಗಲೇ ಭಾರೀ ಮಳೆ ಆರಂಭಗೊಂಡಿದ್ದು, ಜನರು ಆತಂಕಗೊಂಡಿದ್ದಾರೆ.
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತಕ್ಕೆ ಪೂರಕವಾದ ವಾತಾವರಣವಿದ್ದು, ಮುಂದಿನ ಒಂದು ವಾರ ಮಳೆ ಮುಂದುವರಿಕೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಅಕ್ಟೋಬರ್ 05 ರಿಂದ 8 ರವರೆಗೆ ಸಮುದ್ರ ಪ್ರಕ್ಷುಬ್ಧಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಮೀನುಗಾರಿಕೆಗೆ ತೆರಳಿರುವ ಮೀನುಗಾರರು ಈ ಕೂಡಲೇ ಕಿನಾರೆಗೆ ಬರುವಂತೆ ಸಂದೇಶ ರವಾನಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications