ಕರಾವಳಿಯಲ್ಲಿ ಜೂ. 7, 8 ರಂದು ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆ

ಮಂಗಳೂರು, ಜೂನ್ 6: ಕರಾವಳಿಯಲ್ಲಿ ಮತ್ತೆ ಮಹಾಮಳೆಯ ಅತಂಕ ಅರಂಭವಾಗಿದೆ. ಕರಾವಳಿಯಲ್ಲಿ ಜೂನ್ 7 ಮತ್ತು 8 ರಂದು ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು ಹೈ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆಯ ಎಚ್ಚರಿಕೆಯ ಪ್ರಕಾರ ಮುಂದಿನ 5 ದಿನಗಳ ಕಾಲ ಕರ್ನಾಟಕದ ಕರಾವಳಿ ಪ್ರದೇಶ, ಕೇರಳ, ಗೋವಾ , ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.
ಈ ಸಂಬಂಧ ವಿಶೇಷವಾಗಿ ಕೇಂದ್ರ ಹವಾಮಾನ ಇಲಾಖೆ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದು, ಕರ್ನಾಟಕದ ಕರಾವಳಿಯಲ್ಲಿ ಎಚ್ಚರ ವಹಿಸುವಂತೆ ತಿಳಿಸಿದೆ.

High alert, Very Heavy Rain Likely to Hit Coastal Karnataka on June 7, 8

ಹವಾಮಾನ ಇಲಾಖೆಯ ಸೂಚನೆಯಂತೆ, ಜೂನ್ 8 ರಂದು ದಕ್ಷಿಣ ಕನ್ನಡ , ಉಡುಪಿ ಹಾಗು ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಒಂದು ಅಂದಾಜಿನ ಪ್ರಕಾರ ಜೂನ್ 8 ರಂದು ಈ ಮೂರು ಜಿಲ್ಲೆಗಳಲ್ಲಿ 65 ಮಿ.ಮೀ ನಿಂದ 115 ಮಿ.ಮೀ ವರೆಗೆ ಭಾರೀ ಮಳೆ ಸುರಿಯಲಿದೆ. ಸಮುದ್ರದ ಮಟ್ಟದಲ್ಲಿ ಏರಿಕೆ ಯಾಗುವ ಆತಂಕವಿರುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಆದೇಶ ಹೊರಡಿಸಲಾಗಿದೆ.

High alert, Very Heavy Rain Likely to Hit Coastal Karnataka on June 7, 8

ಕರಾವಳಿಗೆ ಈಗಾಗಲೇ ಮುಂಗಾರು ಮಾರುತಗಳ ಪ್ರವೇಶವಾಗಿದೆ ಈ ಹಿನ್ನೆಲೆಯಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್ 6 ರ ಬಳಕೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಹವಾಮಾನ ಇಲಾಖೆ ಜೂನ್ 7 ಮತ್ತು 8 ರಂದು ಮಹಾಮಳೆ ಸುರಿಯುವ ಎಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+