ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ: ಇಂದು ಮಂಗಳೂರು ಬಂದ್‌- ಬಸ್‌ ಮೇಲೆ ಕಲ್ಲು ತೂರಾಟ

ಮಂಗಳೂರು ಮೇ 2:- ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದ್ದು ಇಂದು ದಕ್ಷಿಣ ಕನ್ನಡ ಬಂದ್‌ಗೆ ಕರೆ ನೀಡಲಾಗಿದೆ. ಜೊತೆಗೆ ಮಂಗಳೂರಿನಲ್ಲೂ ನಿಷೇದಾಜ್ಞೆ ಹೇರಲಾಗಿದೆ. ಕಳೆದ ದಿನ ರಾತ್ರಿ ಬಜಪೆಯ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬುವವರನ್ನು ಕೊಲೆ ಮಾಡಲಾಗಿದೆ.

ಹೀಗಾಗಿ ಇಂದು ಬೆಳಿಗ್ಗೆ 6ರಿಂದ (ಮೇ 2) ಸಂಜೆ 6ರವರೆಗೆ ಬಂದ್‌ಗೆ ಕರೆ ನೀಡಲಾಗಿದ್ದು ಅಂಗಡಿ ಮಗ್ಗಟ್ಟುಗಳು, ಹೋಟೆಲ್‌ಗಳನ್ನು ಬಂದ್ ಮಾಡಲಾಗಿದೆ. ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು ತನಕ ಅಂದರೆ ಸುಹಾಸ್ ಶೆಟ್ಟಿ ನಿವಾಸದವರೆಗೂ ಜಾಥಾ ಮೂಲಕ ಮೃತದೇಹವನ್ನು ಸಾಗಾಟಕ್ಕೆ ಕಾರ್ಯಕರ್ತರು ನಿರ್ಧರಿಸಿದ್ದಾರೆ.

hindu activist murdered in mangaluru dakshina kannada bandh today

ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ಸುಮಾರು ಹತ್ತು ಮಂದಿ ಸೇರಿ ತಲವಾರದಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಈ ಘಟನೆ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ಫಾಜಿಲ್ ಎಂಬಾತನ ಕೊಲೆ ಮಾಡಲಾಗಿತ್ತು. ಈ ಹತ್ಯೆ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಮತ್ತು ಇತರ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಸುಹಾಸ್ ಶೆಟ್ಟಿ ಜೈಲಿನಿಂದ ಹೊರ ಬಂದಿದ್ದರು.

ಫಾಜಿಲ್ ಕೊಲೆಗೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ದಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸುಹಾಸ್ ಶೆಟ್ಟಿಯನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸುಹಾಸ್ ಶೆಟ್ಟಿ ಮೃತಪಟ್ಟಿದ್ದು ಆಸ್ಪತ್ರೆ ಎದುರು ಭಾರೀ ಹಿಂದೂ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದರು.

ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಸುಹಾಸ್ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹತ್ಯೆಯ ಹಿಂದೆ ನಿಷೇಧಿತ ಪಿಎಫ್‌ಐ ಕೈವಾಡ ಇದೆ ಎಂದು ದೂರಲಾಗಿದೆ. ಹೀಗಾಗಿ ಬಂದ್‌ಗೆ ಕರೆ ನೀಡಿದ್ದೇವೆ ಎಂದು ಕಾರ್ಯಕರ್ತರು ತಿಳಿಸಿದ್ದಾರೆ. ಪೊಲೀಸ್‌ ಇಲಾಖೆ ವೈಫಲ್ಯದ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಂಚಾಲಕ ಶರಣ್‌ ಪಂಪ್ವೆಲ್ ಹೇಳಿದ್ದಾರೆ.

ಇನ್ನೂ ಮಂಗಳೂರು ಪೊಲೀಸರು ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇದಾಜ್ಞೆ ಜಾರಿಗೊಳಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ (ಮೇ 2) ಸಂಜೆ 6ರವರೆಗೆ ನಿಷೇದಾಜ್ಞೆ ಜಾರಿಯಲ್ಲಿ ಇರಲಿದೆ. ಅಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇಂದು ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿದೆ. ಈಗಾಗಲೆ ಓಡಾಡುವ ಬಸ್‌ ಮೇಲೆ ಕಲ್ಲು ತೂರಾಟ ನಡೆದಿದ್ದು ಚಾಲಕರು ರಸ್ತೆಗಳಿಯಲು ಭಯ ಪಡುತ್ತಿದ್ದಾರೆ. ಬಸ್‌ ಓಡಿಸಿದರೆ ಬಸ್ ಹಾಗೂ ಚಾಲಕರಿಗೂ ತೊಂದರೆಯಾಗುವ ದೃಷ್ಟಿಯಿಂದ ಬಸ್‌ ಸಂಚಾರ ಬಂದ್ ಮಾಡಲಾಗಿದೆ. ಇಂದು ಅಂಗಡಿ, ವ್ಯಾಪಾರ ವಹಿವಾಟು ಕೂಡ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಆಸ್ಪತ್ರೆಗೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೈ ಭರತ್ ಶೆಟ್ಟಿ ಭೇಟಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+