ಬಂಟ್ವಾಳ: ಹಿಂದೂ ಹಿತರಕ್ಷಣಾ ವೇದಿಕೆಯ ಪ್ರತಿಭಟನೆ ಮುಂದೂಡಿಕೆ
ಮಂಗಳೂರು, ಜೂನ್ 23 : ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ನಾಳೆ (ಜೂನ್ 24) ಬಂಟ್ವಾಳ ತಾಲೂಕು ಕಚೇರಿ ಎದುರು ಆಯೋಜಿಸಲಾಗಿದ್ದ ಪ್ರತಿಭಟನೆಯನ್ನು ಮುಂದೂಡಿರುವುದಾಗಿ ಸಮಿತಿಯ ಹರೀಶ್ ಪೂಂಜಾ ತಿಳಿಸಿದ್ದಾರೆ.
ದೇವಸ್ಥಾನ-ಮಂದಿರಗಳ ಮೇಲೆ ದಾಳಿ, ಮತೀಯ ಉಗ್ರವಾದ, ಲವ್ ಜಿಹಾದ್, ಅಕ್ರಮ ಗೋಸಾಗಾಣಿಕೆ, ಹಿಂದೂ ಸಮಾಜದ ಮೇಲೆ ದೌರ್ಜನ್ಯಗಳು ವಿರೋಧಿಸಿ ಹಿಂದೂ ಹಿತರಕ್ಷಣಾ ಸಮಿತಿಯ ವತಿಯಿಂದ ಸರಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಆದರೆ, ಜಿಲ್ಲಾಡಳಿತವು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಸೆಕ್ಷನ್ 144 ಜೂ. 27ರವರೆಗೆ ವಿಸ್ತರಿಸಿರುವುದರಿಂದ ಅದಕ್ಕೆ ಸಹಕರಿಸುವ ನಿಟ್ಟಿನಲ್ಲಿ ಪ್ರತಿಭಟನೆಯನ್ನು ಮುಂದೂಡಲಾಗಿದೆ ಎಂದರು.

ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ರಾಜ್ಯ ಸರಕಾರ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವರ ಜವಾಬ್ಧಾರಿ. ಈ ನಿಟ್ಟಿನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರು ಪ್ರಾಮಾಣಿಕ ಪ್ರಯತ್ನ ನಡೆಸುತ್ತಿಲ್ಲ. ಹಾಗಾಗಿ ಹಿಂದೂ ಶಕ್ತಿಯನ್ನು ಸಮಾಜ ಹಾಗೂ ಸರಕಾರಕ್ಕೆ ತೋರಿಸುವ ಸಲುವಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.












Click it and Unblock the Notifications