• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಂಗಳೂರಲ್ಲಿ ಮತ್ತೆ ಹರಿದ ನೆತ್ತರು:ಹಿಂದೂ ಸಂಘಟನೆ ಮುಖಂಡನ ಮೇಲೆ ದಾಳಿ

|

ಮಂಗಳೂರು, ಸೆಪ್ಟೆಂಬರ್. 25: ಮಂಗಳೂರಿನಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಹಿಂದೂ ಸಂಘಟನೆಯ ಮುಖಂಡನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ತಾಲೂಕಿನ ಕೈಕಂಬದ ಸೂರಲ್ಪಾಡಿ ಎಂಬಲ್ಲಿ ಈ ಘಟನೆ ನಡೆದಿದೆ.

ವಿಶ್ವಹಿಂದೂ ಪರಿಷತ್ ಮುಖಂಡ, ಪೊಳಲಿ ನಿವಾಸಿ ಹರೀಶ್ ಶೆಟ್ಟಿ (38) ಎಂಬುವವರ ಮೇಲೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ. ಘಟನೆಯಲ್ಲಿ ಹರೀಶ್ ಶೆಟ್ಟಿಗೆ ಕೈ ಹಾಗು ತಲೆಗೆ ಗಂಭೀರವಾಗಿ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ಳಂಬೆಳಗ್ಗೆ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣ ಆರೋಪಿ ಮೇಲೆ ದಾಳಿ

ಹರೀಶ್ ಶೆಟ್ಟಿ ಕೈಕಂಬದಲ್ಲಿ ಖಾಸಗಿ ಬಸ್ ಟೈಂ ಕೀಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ 8 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಹರೀಶ್ ಮೇಲೆ 2 ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಪ್ರಣಯ್ ಹತ್ಯೆ ಭೇದಿಸಿದ ಪೊಲೀಸ್! ಕೊಲೆಗಾರನಿಗೆ 1 ಕೋಟಿ ರು. ಸುಪಾರಿ!

ಆಸ್ಪತ್ರೆಗೆ ಮಂಗಳೂರು ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಭೇಟಿ ನೀಡಿ ಮಾಹಿತಿ ಪಡೆದು ತನಿಖೆಗೆ ಆದೇಶಿಸಿದ್ದಾರೆ.

ಸೋಮವಾರ ಮುಂಜಾನೆ ಮೂಡಬಿದರೆಯ ಗಂಟಲ್ ಕಟ್ಟೆ ಎಂಬಲ್ಲಿ ಪ್ರಶಾಂತ ಪೂಜಾರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಮ್ತಿಯಾಜ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡ ದಾಳಿ ನಡೆಸಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಳಿಗೆ ಒಳಗಾದ ಇಮ್ತಿಯಾಜ್ ಅಪಾಯದಿಂದ ಪಾರಾಗಿದ್ದರು.

ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಮರ್ಯಾದಾ ಹತ್ಯೆ ಮಾಡಿದವರಿಂದಲೇ ಕೃತ್ಯ?

ಇಮ್ತಿಯಾಜ್ ಮೇಲಿನ ಹಲ್ಲೆಗೆ ಪ್ರತೀಕಾರವಾಗಿಯೇ ಹರೀಶ್ ಶೆಟ್ಟಿ ಅವರ ಮೇಲೆ ತಲವಾರು ದಾಳಿ ನಡೆದಿದೆ ಎಂದು ಹೇಳಲಾಗಿದೆ. ಇಮ್ತಿಯಾಜ್ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನುಳಿದವರ ಬಂಧನಕ್ಕೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.

English summary
Hindu organisation leader Harish Shetty attacked in Mangaluru. This incident occurred in Kaikamba near Near Ganjimatta
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X