ಅ.28ರಂದು ಹಿಂದೂ ಸಂಘಟನೆಗಳಿಂದ ಕಡಬ ಬಂದ್ ಗೆ ಕರೆ

Recommended Video

      ಅ.28ರಂದು ಹಿಂದೂ ಸಂಘಟನೆಗಳಿಂದ ಕಡಬ ಬಂದ್ ಗೆ ಕರೆ | Oneindia Kannada

      ಮಂಗಳೂರು, ಅಕ್ಟೋಬರ್ 27 : ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮೆಕ್ಕಾ ಮಸೀದಿಯ ಅವಹೇಳನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೋಲಿಸರಿಗೆ ಒಪ್ಪಿಸಿದರೂ ಅಮಾಯಕ ಹಿಂದೂ ಕಾರ್ಯಕರ್ತರನ್ನು ಪೋಲೀಸರು ಪ್ರಕರಣದಲ್ಲಿ ಸಿಲುಕಿಸಲು ಹುನ್ನಾರ ನಡೆಸಿದ್ದಾರೆ ಎಂದ ಬೆಳ್ತಂಗಡಿ ಹಿಂದೂ ಸಂಘಟನೆಗಳು ಆರೋಪಿಸಿವೆ.

      ಪೊಲೀಸ್ ಅಧಿಕಾರಿಗಳ ಈ ಹುನ್ನಾರವನ್ನು ವಿರೋಧಿಸಿ ಅಕ್ಟೋಬರ್ 28 ಶನಿವಾರದಂದು ಬೆಳ್ತಂಗಡಿಯ ಕಡಬ ಬಂದ್ ಗೆ ಕರೆ ನೀಡಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ. ಕಡಬದಲ್ಲಿ ಗುರುವಾರ ಸಂಜೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿವೆ.

      Hindu organizations called Kadaba taluk bandh on oct 28

      ವಾಟ್ಸಾಪ್ ಅವಹೇಳ ಪ್ರಕರಣದಲ್ಲಿ ಆರೋಪಿತ ಯುವಕನನ್ನು ಸಂಘಟನೆಯ ಪ್ರಮುಖರೇ ಪೋಲೀಸರಿಗೆ ಒಪ್ಪಿಸಿ ಪ್ರಕರಣವನ್ನು ಸೌಹಾರ್ದಯುತವಾಗಿ ಮುಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದರು.

      ಆದರೆ, ಪ್ರಕರಣದಲ್ಲಿ ಅಮಾಯಕ ಹಿಂದೂ ಯುವಕರನ್ನು ಸಿಲುಕಿಸಲು ಪೊಲೀಸ್ ಅಧಿಕಾರಿಗಳು ಯತ್ನಿಸುತಿದ್ದಾರೆ ಎಂದು ಹಿಂದೂ ಸಂಘಟನೆಯ ಮುಖಂಡರು ಕಿಡಿಕಾರಿದರು.

      ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೋಲೀಸರಿಗೆ ನಾವು ಇಷ್ಟೊಂದು ಸಹಕಾರ ನೀಡುತ್ತಿರುವಾಗ ಪ್ರಕರಣಕ್ಕೆ ಸಂಬಂಧಪಡದ ಯುವಕನೊಬ್ಬನನ್ನು ಪ್ರಕರಣದಲ್ಲಿ ಹೆಚ್ಚುವರಿಯಾಗಿ ಸೇರ್ಪಡೆ ಮಾಡಿ ಹಿಂದೂಗಳನ್ನು ಧಮನಿಸಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+