Hit and run incident in Mangalore: ಮಂಗಳೂರಿನಲ್ಲಿ ಹಿಟ್ ಅಂಡ್ ರನ್ ಘಟನೆ: 2 ಸಾವು, ಒಬ್ಬರಿಗೆ ಗಾಯ!
ದೆಹಲಿ ಹಿಟ್ ಅಂಡ್ ರನ್ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲೂ ಇಂತಹದ್ದೇ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಒಬ್ಬರಿಗೆ ಗಾಯವಾಗಿದೆ.
ದೆಹಲಿ ಬಳಿಕ ಮಂಗಳೂರಿನಲ್ಲಿ ಹಿಟ್ ಅಂಡ್ ರನ್ ಪ್ರಕರಣ ದಾಖಲಾಗಿದೆ. ಮಂಗಳೂರು ಸಮೀಪದ ಪಡುಪಣಂಬೂರಿನಲ್ಲಿ ವೇಗವಾಗಿ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಾಯಗೊಂಡಿದ್ದಾರೆ. ಬುಧವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರಿನಿಂದ ಸುಮಾರು 30 ಕಿಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ದುರ್ಘಟನೆ ನಡೆದಿದೆ. ಮೃತರನ್ನು ಬಬ್ಲು ಮತ್ತು ಅಚಲ್ ಸಿಂಗ್ ಎಂದು ಗುರುತಿಸಲಾಗಿದೆ. ಅನೀಶ್ ಎಂಬ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ವರದಿಗಳ ಪ್ರಕಾರ, ಮೂವರು ಜನರು ಲಾರಿಯಲ್ಲಿ ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳಕ್ಕೆ ತೆರಳುತ್ತಿದ್ದರು. ಪಂಕ್ಚರ್ ಆದ ಲಾರಿಯ ಟೈರ್ ಅನ್ನು ಬದಲಾಯಿಸಲು ಮುಂದಾದಾಗ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.












Click it and Unblock the Notifications