ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು

|
Google Oneindia Kannada News

ಮಂಗಳೂರು, ಏಪ್ರಿಲ್ 03:ಸಾಮಾಜಿಕ ಜಾಲತಾಣದ ಮೂಲಕ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಮಂಗಳೂರು ಪೊಲೀಸರು ಭೇದಿಸಿದ್ದಾರೆ. ಲೊಕ್ಯಾಂಟೋ ವೆಬ್ ಸೈಟ್ ಮುಖಾಂತರ ಹೈಫೈ ವೇಶ್ಯಾವಾಟಿಕೆ ಜಾಲ ಪತ್ತೆ ಹಚ್ಚಿದ ಮಂಗಳೂರು ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರಿನ ಎಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ನಿರೀಕ್ಷಕರಿಗೆ ಬಂದ ಖಚಿತ ಮಾಹಿತಿ ಮೇರೆಗೆ ನಂತೂರು ಜಂಕ್ಷನ್ ಬಳಿ ಇರುವ ಸ್ಟಾರ್ ಲಿಜೆಸಿ ಅಪಾರ್ಟ್ ಮೆಂಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು.

ಮಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ: 6 ಯುವತಿಯರ ರಕ್ಷಣೆಮಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ: 6 ಯುವತಿಯರ ರಕ್ಷಣೆ

ಅಪಾರ್ಟ್ ಮೆಂಟ್ ನ ಜಿ-1ಫ್ಲಾಟ್ ನಲ್ಲಿ ಹೊರ ರಾಜ್ಯದ ಮಹಿಳೆಯರನ್ನು ಇಟ್ಟುಕೊಂಡು ಲೊಕ್ಯಾಂಟೋ ವೆಬ್ ಸೈಟ್ ಮುಖಾಂತರ ಮಹಿಳೆಯರ ಫೋಟೋವನ್ನು ಅಪ್ಲೋಡ್ ಮಾಡಿ ಗಿರಾಕಿಗಳನ್ನು ಆಹ್ವಾನಿಸಿ ಹೈ ಫೈ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿತ್ತು.

Hitech prostitution racket busted in Mangaluru

ಮಾಹಿತಿಯಂತೆ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಮನೆಯಲ್ಲಿದ್ದ ಉತ್ತರ ಪ್ರದೇಶ ಮತ್ತು ಒಡಶಾ ಮೂಲದ 3 ಯುವತಿಯರನ್ನು ಪೊಲೀಸರು ರಕ್ಷಿಸಿದ್ದಾರೆ.

ಮಂಗಳೂರಿನಲ್ಲಿ ಮತ್ತೊಂದು ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರುಮಂಗಳೂರಿನಲ್ಲಿ ಮತ್ತೊಂದು ಹೈಟೆಕ್ ವೇಶ್ಯಾವಾಟಿಕೆ ಜಾಲ ಭೇದಿಸಿದ ಪೊಲೀಸರು

ಬಂಧಿತರನ್ನು ಬಂಟ್ವಾಳದ ಐವನ್ ಸಿರಿಲ್ ಪಿಂಟೊ ಮತ್ತು ಯೆಯ್ಯಾಡಿಯ ನಿವಾಸಿ ಸತೀಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಬಂಧಿತ ಅರೋಪಿಗಳಿಂದ 23 ಸಾವಿರ ರೂಪಾಯಿ ನಗದು ಸೇರಿದಂತೆ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ.

English summary
Mangaluru police team busted Hitech prostitution racket in a apartment near Nantoor. During this time police rescued 3 womens.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X