Shool-Colleges Holiday: ದಕ್ಷಿಣ ಕನ್ನಡ ಜಿಲ್ಲೆಯ ಎರಡು ತಲ್ಲೂಕುಗಳಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Shool-Colleges Holiday: ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಕಾರಣಾಂತಗಳಿಗಳಿಂದ ಸಾಲು ರಜೆಗಳನ್ನೇ ಘೋಷಿಸಲಾಗಿದೆ. ಅಲ್ಲದೇ, ಇವುಗಳನ್ನು ಸರಿದೂಗಿಸುವ ಕೆಲಸಗಳು ಸಹ ನಡೆಯುತ್ತಿವೆ. ಈ ನಡುವೆಯೇ ಇದೀಗ ಇಂದು (ಜುಲೈ 19) ದಕ್ಷಿಣ ಕನ್ನಡದ ಎರಡು ತಲ್ಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಕಾರಣ ಏನು ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಇದೀಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಚುರುಕು ಪಡೆದಿದೆ. ಕೆಲವೆಡೆ ಸಾಧಾರಣ ಮಳೆಯಾದ್ರೆ, ಇನ್ನೂ ಕೆಲ ಭಾಗಗಳಲ್ಲಿ ರಣಭೀಕರ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿ ಬೊಬ್ಬೆರೆಯುತ್ತಿದ್ದಾನೆ.

ಜುಲೈ 19 ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎರಡು ತಾಲ್ಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮಂಗಳೂರು ತಾಲ್ಲೂಕಿನಲ್ಲಿ ಅಂಗನವಾಡಿಯಿಂದ ಹಿಡಿದು ದ್ವಿತೀಯ ಪಿಯುಸಿವರೆಗಿನ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದರೆ, ಬಂಟ್ವಾಳ ತಾಲೂಕಿನಲ್ಲಿ ಪ್ರೌಢ ಶಾಲೆವರೆಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಈಗಾಗಲೇ ಈ ಹಿಂದೆಯೂ ಸಹ ಈ ಭಾಗಗಳಲ್ಲೇ ಹೆಚ್ಚಿನ ಮಳೆಯಾದಂತಹ ಸಂದರ್ಭದಲ್ಲಿ ರಜೆಗಳನ್ನು ನೀಡಲಾಗಿದ್ದು, ಇವುಗಳನ್ನು ಸರಿದೂಗಿಸುವ ಕೆಲಸ ಸಹ ನಡೆಯುತ್ತಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿಂದುಳಿಯಬಾರದು ಎಂಬ ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಶನಿವಾರ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಹವಾಮಾನ ಇಲಾಖೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಬೆಂಗಳೂರು, ಮಂಡ್ಯ, ರಾಮನಗರ ಸೇರಿ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ರಾಜ್ಯಾದ್ಯಂತ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ ಅದರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಈ ಭಾಗದಲ್ಲಿನ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಕೋಲಾರ, ಬೀದರ್, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಒಂದೆರಡು ಕಡೆಗಳಲ್ಲಿ ಇದೇ ರೀತಿಯ ವಾತಾವರಣ ಇರಲಿದ್ದು ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications