Rain Alert: ಮಂಗಳೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ದಿಢೀರ್ ರಜೆ ಘೋಷಣೆ
ಮಂಗಳೂರು, ಜುಲೈ 08: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟಕ್ಕೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ನಿನ್ನೆಯಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಶಾಲೆಗಳಿಗೆ ಇಂದು ಜುಲೈ 08ರಂದು ರಜೆ ಘೋಷಿಸಲಾಗಿದೆ. ಅಂಗನವಾಡಿ ಸೇರಿದಂತೆ ಮಂಗಳೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎನ್ನುವ ದೃಷ್ಠಿಯಿಂದ ಮಂಗಳೂರು ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ..?
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
1. ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ರಜೆ ಘೋಷಣೆ.
2. ಸಂಭಾವ್ಯ ಪ್ರವಾಹ/ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
3. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು.
4. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
5. ತಾಲೂಕಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ/ತೋಡುಗಳ ಮತ್ತು ವಿದ್ಯುತ್ ಕಂಬ/ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸುವುದು.
6. ಸಂಭಾವ್ಯ ಹಾನಿಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ತಾಲೂಕು ಆಡಳಿತದ ಸಲಹೆ/ಸೂಚನೆಗಳನ್ನು ಪಾಲಿಸುವುದು.
7. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್/ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿಯನ್ನು ನೀಡಬೇಲು ಎಂದು ಜಿಲ್ಲಾಡಳಿತ ತಿಳಿಸಿದೆ.












Click it and Unblock the Notifications