ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ನಾಳೆ ರಜೆ, ಎರಡು ದಿನ ರೆಡ್ ಅಲರ್ಟ್
ಮಂಗಳೂರು, ಆಗಸ್ಟ್ 6: ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ 2 ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಕರ್ನಾಟಕದ ಮಹಾಮಳೆ, ಚಿತ್ರಗಳಲ್ಲಿ ನೋಡಿ
ಹವಾಮಾನ ಇಲಾಖೆ ಹೊರಡಿಸಿರುವ ಸೂಚನೆ ಪ್ರಕಾರ ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯಲಿದೆ. ಈ ಕುರಿತು ಹವಾಮಾನ ಇಲಾಖೆ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಜಿಲ್ಲೆಯ ಅನುದಾನಿತ, ಖಾಸಗಿ, ಅಂಗನವಾಡಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದಾರೆ. ಜೊತೆಗೆ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.
2 ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ.

ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಸೂಚನೆ ನೀಡಿದ್ದಾರೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications