Holiday: ನಾಳೆ ರಾಜ್ಯದ ಈ ಭಾಗಗಳಲ್ಲಿ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
School Holiday: ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಹಾಗೆಯೇ ಶನಿವಾರ (ಆಗಸ್ಟ್ 8) ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ರಾಜ್ಯದ ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರೆದಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.

ನಾಲ್ಕು ತಾಲ್ಲೂಕುಗಳಲ್ಲಿ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಪುತ್ತೂರು ಉಪವಿಭಾಗಕ್ಕೆ ಒಳಪಡುವ ಪುತ್ತೂರು, ಬೆಳ್ತಂಗಡಿ, ಕಡಬ ಹಾಗೂ ಸುಳ್ಯ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಶಾನಿವಾರ ರಜೆ ಘೋಷಣೆ ಮಾಡಿದ್ದಾರೆ.
ಈ ನಾಲ್ಕೂ ತಾಲೂಕುಗಳ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಅಂಗನವಾಡಿಗಳು, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ-ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಈ ರಜೆ ಅನ್ವಯ ಆಗಲಿದೆ. ಇನ್ನೂ ಗ್ರಾಮಾಂತರ ಭಾಗಗಳಲ್ಲಿ ರಸ್ತೆಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುವ ಸಾಧ್ಯತೆ ಇದ್ದು, ಸಣ್ಣ ಸಣ್ಣ ಸೇತುವೆಗಳ ಮೇಲೆ ನೀರು ಹರಿಯುವ ಆತಂಕ ಎದುರಾಗಿದೆ.
ಆದ್ದರಿಂದ ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಅಪಾಯ ಆಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತಳೆಯಲಾಗಿದೆ. ಜಿಲ್ಲಾಡಳಿತವು ನದಿ ತೀರ, ತಗ್ಗು ಪ್ರದೇಶ ಹಾಗೂ ಸಡಿಲ ಮಣ್ಣಿನ ಗುಡ್ಡ ಕುಸಿತದ ಭೀತಿ ಇರುವ ಪ್ರದೇಶಗಳ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಅಲ್ಲದೆ, ಪೋಷಕರು ತಮ್ಮ ಮಕ್ಕಳನ್ನು ನೀರು ಹರಿಯುವ ಹಳ್ಳ, ನದಿ ಹಾಗೂ ಕಡಲತೀರಕ್ಕೆ ಹೋಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿಕೊಂಡಿದೆ.


Click it and Unblock the Notifications
