ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್; ಇಂದು ಶಾಲಾ ಕಾಲೇಜುಗಳಿಗೆ ರಜೆ

|
Google Oneindia Kannada News

ಮಂಗಳೂರು, ಜುಲೈ 23: ಕರಾವಳಿಯಲ್ಲಿ ಕಳೆದ 4 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮಳೆ ಮುಂದುವರೆಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

 ಸಿರಿವಾಗಿಲು ಬಳಿ ಭೂಕುಸಿತ; 2 ದಿನ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ ಸಿರಿವಾಗಿಲು ಬಳಿ ಭೂಕುಸಿತ; 2 ದಿನ ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತ

ಹವಾಮಾನ ಇಲಾಖೆ ಹೊರಡಿಸಿರುವ ಸೂಚನೆ ಪ್ರಕಾರ, ಜುಲೈ 25ರವರೆಗೆ ಪ್ರತಿದಿನ 200 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಜಿಲ್ಲೆಯ ಅನುದಾನಿತ, ಖಾಸಗಿ, ಅಂಗನವಾಡಿ ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಇಂದಿನಿಂದ 3 ದಿನಗಳ ಕಾಲ ಪ್ರತಿದಿನ 200 ಮಿ.ಮಿ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

holiday declared for schools colleges of Dakshina Kannada district on July 23

ಮುಂದಿನ 3 ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ.

ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

English summary
Dakshina Kannada DC Sasikanth Senthil declared holiday for all schools and colleges of Dakshina Kannada district on July 23 due to heavy rain,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X