ಮುಂದಿನ ಮೂರು ದಿನವೂ ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ

ಮಂಗಳೂರು, ಜುಲೈ 19: ಕರಾವಳಿಯಲ್ಲಿ ಕಳೆದ 2 ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಸೇರಿದಂತೆ ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗುತ್ತಿದೆ. ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಮುಂಗಾರು ಮತ್ತಷ್ಟು ಬಿರುಸುಗೊಳ್ಳುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ಕರಾವಳಿಯಾದ್ಯಂತ ಭಾರೀ ಮಳೆಯಾಗಲಿದೆ. ನಾಳೆಯಿಂದ 3 ದಿನಗಳ ಕಾಲ ಪ್ರತಿದಿನ 200 ಮಿ.ಮಿ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬುತ್ತಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗೃತೆ ವಹಿಸಬೇಕೇಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮನವಿ ಮಾಡಿದ್ದಾರೆ.

holiday declared for schools colleges of Dakshina Kannada Due to heavy rain

ಮುಂದಿನ 3 ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರವಾಸಿಗರು ಮತ್ತು ಸಾರ್ವಜನಿಕರು ನದಿ ತೀರಕ್ಕೆ ಹಾಗು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕೆಂದು ಸೂಚಿಸಲಾಗಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇಂದು ಮುಂಜಾನೆಯಿಂದ ಮಂಗಳೂರು ನಗರದಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಾರಿ ಕರಾವಳಿಯಲ್ಲಿ ಮುಂಗಾರು ಮಳೆ ಅಷ್ಟಾಗಿ ಸುರಿದಿಲ್ಲ. ಅಲ್ಲದೆ ಕಳೆದ ಕೆಲ ದಿನಗಳಿಂದ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದ ಮುಂಗಾರು ಮಳೆ ನಿನ್ನೆಯಿಂದ ಅಬ್ಬರಿಸುತ್ತಿದೆ.

ಹವಾಮಾನ ಇಲಾಖೆ ಈಗಾಗಲೇ ಕರಾವಳಿ ಜಿಲ್ಲೆಗಳಲ್ಲಿ ಜುಲೈ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ಕರಾವಳಿ ಭಾಗದಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+