ಗಣೇಶ ಚತುರ್ಥಿ: ದಕ್ಷಿಣ ಕನ್ನಡ-ಉಡುಪಿ ಜಿಲ್ಲೆಗಳಿಗೆ ಸೆಪ್ಟೆಂಬರ್ 19 ಸರ್ಕಾರಿ ರಜೆ
ಮಂಗಳೂರು, ಸೆಪ್ಟೆಂಬರ್ 16: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರದ ಸೂಚನೆ ಮೇರೆಗೆ ಜಿಲ್ಲಾವಳಿತ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿವೆ. ಹಲವೆಡೆ ಸೋಮವಾರ (ಸೆಪ್ಟೆಂಬರ್ 18) ದಂದು ಹಬ್ಬ ಆಚರಿಸುತ್ತಿದ್ದರೆ, ಮತ್ತೆ ಕೆಲವೆಡೆ ಮಂಗಳವಾರ (ಸೆಪ್ಟೆಂಬರ್ 19) ದಂದು ಆಚರಿಸಲಾಗುತ್ತಿದೆ. ಈ ಹಿಂದೆ ಸರ್ಕಾರ ನಿಗದಿ ಪಡಿಸಿದ ರಜೆಯು ಸೋಮವಾರ ಸೆಪ್ಟೆಂಬರ್ 18ರಂದು ಎಂದು ಆದೇಶ ನೀಡಿತ್ತು.

ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಹಬ್ಬ ಆಚರಿಸುವ ಕಾರಣ ಅದೇ ದಿನ ಸರ್ಕಾರಿ ರಜೆ ನೀಡಬೇಕು ಎಂದು ಅನೇಕರು ಅಂದೇ ದಿನ ರಜೆಗೆ ಆಗ್ರಹಿಸಿದ್ದರು. ಜನಪ್ರತಿನಿಧಿಗಳು ಕೂಡಾ ಸರ್ಕಾರಕ್ಕೆ ಮುಖ್ಯ ಕಾರ್ಯದರ್ಶಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಧಿಕಾರಿಯವರಿಗೆ ಸೆಪ್ಟೆಂಬರ್ 19 ರಂದು ರಜೆ ನೀಡಬೇಕು ಎಂದು ಒತ್ತಾಯಿಸಿದ್ದರು.
ಇದೀಗ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯ ಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಯವರಿಗೆ ಸೆ.19ರಂದು ರಜೆ ನೀಡಲು ಪತ್ರ ಮೂಲಕ ತಿಳಿಸಿದ್ದರು. ಇದೀಗ ಸರ್ಕಾರದ ಅಧಿಕೃತ ಆದೇಶ ಬಂದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ಇರಲಿದೆ.












Click it and Unblock the Notifications