ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು, ಅಕ್ಟೋಬರ್ 24: ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪಗಳಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ರಾಜ್ಯದ ಅನೇಕ ಕಡೆ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಮಳೆ ಇನ್ನಷ್ಟು ರಭಸದಿಂದ ಸುರಿಯುವ ಸಾಧ್ಯತೆ ಇರುವುದರಿಂದ ನೀರಿನ ಮಟ್ಟ ಹೆಚ್ಚಾಗಿ ಪ್ರವಾಹ ಪರಿಸ್ಥಿತಿ ಉಂಟಾಗುವ ಅಪಾಯವಿದೆ. ಹೀಗಾಗಿ ಮುನ್ನೆಚ್ಚರಿಕೆ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲೆ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.

Holiday For Schools Friday Dakshina Kannada Weather Department Issued Red Alert

ನೀರು ತುಂಬಿರುವ ತಗ್ಗಿನ ಪ್ರದೇಶಗಳಿಗೆ, ಕೆರೆ, ನದಿ, ಸಮುದ್ರ ತೀರಗಳಿಗೆ ಹೋಗದಂತೆ ಸೂಚನೆ ನೀಡಲಾಗಿದೆ. ಮೀನುಗಾರರು ಇನ್ನು ಮೂರು ದಿನ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಜಿಲ್ಲಾಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಆದೇಶಿಸಲಾಗಿದೆ. ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ 1077 ಸಂಖ್ಯೆಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+