Get Updates
Get notified of breaking news, exclusive insights, and must-see stories!

ಮಂಗಳೂರು: ವ್ಯಾಪಾರದಲ್ಲಿ ಧರ್ಮ ರಾಜಕಾರಣದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು?

ಮಂಗಳೂರು, ಡಿಸೆಂಬರ್‌ 25: ಪರಮೇಶ್ವರ್ ಎಲ್ಲಾ ಸರಿ ಕಣ್ರೀ ಆದರೆ..ದಲಿತ. ಇಂತಹ ಕೀಳರಿಮೆಯನ್ನು ತೆಗೆದು ಹಾಕಬೇಕಾದಲ್ಲಿ ನಾವೆಲ್ಲಾ ಒಗ್ಗಟ್ಟಾಗಬೇಕು. ಒಗ್ಗಟ್ಟಾಗದಿದ್ದಲ್ಲಿ ತುಳಿತಕ್ಕೊಳಗಾದ, ಶೋಷಿತ ಸಮಾಜ ಹಾಗೆಯೇ ಮುಂದುವರಿಯುತ್ತದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ನಡೆದ ರಾಜ್ಯ ಆದಿದ್ರಾವಿಡ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ರಕ್ಷಣೆಗೆ ಯಾರೂ ಬರುವುದಿಲ್ಲ. ಶಿಕ್ಷಣದಿಂದ ಮಾತ್ರ ಬಲಯುತರಾಗಲು ಸಾಧ್ಯ. ಆದ್ದರಿಂದ ಆದಿ ದ್ರಾವಿಡ ಸಮಾಜದ ಪ್ರತೀ ಮನೆಯಿಂದ ಓರ್ವನನ್ನಾದರೂ ಪದವೀಧರರನ್ನಾಗಿಸುವ ಸಂಕಲ್ಪವನ್ನು ಸಮುದಾಯದ ಪ್ರತಿಯೊಬ್ಬರೂ ಮಾಡಬೇಕು ಎಂದರು.

Home Minister G. Parameshwara Reaction About Religion Politics In Business At Mangaluru

ನಾನು ಆದಿದ್ರಾವಿಡ ಸಮುದಾಯದಿಂದ ಬಂದವನು. ಆದರೆ ನಾನು ಹೊರದೇಶಕ್ಕೆ ಹೋಗಿ ಶಿಕ್ಷಣ ಪಡೆಯುವಷ್ಟು ನನ್ನ ತಂದೆ ಶಿಕ್ಷಣದ ಬಗ್ಗೆ ಒಲವು ಇರಿಸಿಕೊಂಡಿದ್ದರು. ಬಳಿಕ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸಿ 35 ವರ್ಷಗಳ ರಾಜಕೀಯ ಜೀವನ ನಡೆಸಿದ್ದೇನೆ. ಸಚಿವನಾಗಿದ್ದೇನೆ, ಪ್ರದೇಶ ಕಾಂಗ್ರೆಸ್ ಅಧ್ಯಕ್ಷನಾಗಿ ಎಂಟು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಎಲ್ಲಕ್ಕಿಂತ ಹೆಚ್ಚಾಗಿ ಈ ರಾಜ್ಯದಲ್ಲಿ ಮೂರು ಬಾರಿ ಗೃಹ ಸಚಿವನಾಗಿ ದಾಖಲೆ ಬರೆದಿದ್ದೇನೆ. ಕಷ್ಟ ಎಲ್ಲರಿಗೂ ಇದ್ದದ್ದೇ. ಆದರೆ ಆ ಕಷ್ಟದಲ್ಲೂ ಎಲ್ಲರೂ ವಿದ್ಯಾವಂತರಾಗಬೇಕು. ಒಂದು ಹೊತ್ತು ಊಟ ಬಿಟ್ಟುಬಿಡಿ. ಅದೇ ಹಣದಿಂದ ನಿಮ್ಮ ಮನೆಯ ಮಗ ಅಥವಾ ಮಗಳನ್ನು ವಿದ್ಯಾವಂತರನ್ನಾಗಿ ಮಾಡಿ ಎಂದು ಕರೆ ನೀಡಿದರು‌.

ನಿಮ್ಮದೇ ಆದಿದ್ರಾವಿಡ ಸಮುದಾಯಕ್ಕೆ ಸೇರಿದವನು ಗೃಹಸಚಿವನಾಗಿ ಈ ರಾಜ್ಯದಲ್ಲಿ ನಿಮ್ಮ ಪ್ರತಿನಿಧಿಯಾಗಿ ಇದ್ದಾನೆ ಎಂದು ತಿಳಿಯಿರಿ. ಆ ಕಾರಣದಿಂದಲೇ ನಾನು ಈ ಸಮಾವೇಶಕ್ಕೆ ಬಂದಿದ್ದೇನೆ. ಈ ದೇಶದ ವರ್ಣಾಶ್ರಮ ವ್ಯವಸ್ಥೆಯಲ್ಲಿ ನಮ್ಮನ್ನು ಶೂದ್ರರು ಅತೀ ಶೂದ್ರರು ಎಂದು ಹೊರಗಿಟ್ಟಿದ್ದಾರೆ. ನಮ್ಮನ್ನು ಅತ್ಯಂತ ಕೀಳುಮಟ್ಟದಲ್ಲಿ ನೋಡಲಾಗುತ್ತಿದೆ‌. ಇಂದು ಒಂದಿಷ್ಟು, ಸ್ಥಾನಮಾನ ಗೌರವ ಅಂಥ ಹೇಳೋದಿಲ್ಲ, ಒಂದು ಗುರುತಿಸುವಿಕೆ ಇದೆಯೆಂದರೆ ಬಹುಶಃ ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ಪರಿಶಿಷ್ಟ ಸಮಾಜಕ್ಕೆ ಮೀಸಲಾತಿ ನೀಡಿದ್ದೇ ಕಾರಣ ಎಂದರು.

ಇಂದು ನನ್ನ ಮುಂದೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದ್ದೀರಿ. ನಿಮ್ಮ ಸಮುದಾಯದಲ್ಲೊಬ್ಬನಾಗಿ ನಾನು ಈ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನ ಪಡುತ್ತೇನೆ ಎಂದು ಡಾ.ಜಿ.ಪರಮೇಶ್ವರ್ ಸಮುದಾಯದ ಮುಂದೆ ಭರವಸೆ ನೀಡಿದರು.

Home Minister G. Parameshwara Reaction About Religion Politics In Business At Mangaluru

ಹಿಜಾಬ್ ರದ್ದತಿ ವಾಪಾಸ್ ವಿಚಾರದಲ್ಲಿ ಮಂಗಳೂರಿನಲ್ಲಿ ಗೃಹಸಚಿವ ಡಾ‌.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿ, ಹಿಜಾಬ್ ವಿಚಾರದಲ್ಲಿ ನಾವು ಆದೇಶವೇ ಮಾಡಿಲ್ಲ. ಒಂದು ವೇಳೆ ಮಾಡಿದ್ದರೂ ನಾವು ಅದನ್ನು ಪರಿಶೀಲನೆ ಮಾಡುತ್ತೇವೆ ಎಂಬ ಮಾತನ್ನು ಸಿಎಂ ಸಿದ್ದರಾಮಯ್ಯರೇ ಹೇಳಿದ್ದಾರೆ. ಅದರ ಸಾಧಕ ಭಾದಕವನ್ನು ನೋಡಿಕೊಂಡು ಸರಕಾರ ತೀರ್ಮಾನ ಕೈಗೊಳ್ಳುತ್ತದೆ. ಗೊಂದಲ ಮಾಡುವ ಅವಶ್ಯಕತೆಯಿಲ್ಲ. ಮುಸ್ಲಿಂ ಸಮುದಾಯದವರು ಹಿಜಾಬ್ ಅನ್ನು ಹಾಕಿಕೊಂಡೇ ಬರುತ್ತಾರೆ. ಬಿಜೆಪಿ ಸರ್ಕಾರ ಬಂದ ಬಳಿಕ ಈ ಗೊಂದಲ ಸೃಷ್ಟಿಯಾಗಿದೆ. ಆದ್ದರಿಂದ ಈ ಮೊದಲು ನಾವು ಯಾವ ರೀತಿ ಜೀವನ ನಡೆಸಿದೆವೋ ಅದೇ ರೀತಿ ಇದ್ದರೆ ಒಳಿತು ಎಂದರು.

ಸಂತೆ ವ್ಯಾಪಾರದಲ್ಲಿ ಧರ್ಮ ರಾಜಕಾರಣದ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮ ಹಾಗೂ ಜನಸಮುದಾಯದ ಹಕ್ಕುಗಳ ವಿಚಾರಗಳಲ್ಲಿ ನಾವು ಸಂವಿಧಾನವನ್ನು ಬಿಟ್ಟು ಯಾವ ಕೆಲಸವನ್ನು ಮಾಡುವುದಿಲ್ಲ. ಯಾವ ತೀರ್ಮಾನ ತೆಗೆದುಕೊಳ್ಳುವುದಿದ್ದಲ್ಲೂ ಸಂವಿಧಾನದ ಚೌಕಟ್ಟಿನೊಳಗೇ ತೆಗೆದುಕೊಳ್ಳುತ್ತೇವೆ. ಇದು ಕೆಲವರಿಗೆ ನೋವಾಗಬಹುದು, ಇನ್ನು ಕೆಲವರಿಗೆ ಸಂತೋಷವಾಗಬಹುದು ಎಂದರು.

ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್ ವಿಂಗ್ ಮಾಡಿದ್ದರೂ ಕಡಿವಾಣ ಬಿದ್ದಂತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಹಳಷ್ಟು ಕಡಿಮೆ ಆಗಿದೆ ಎಂಬುದು ನಮಗೆ ಬಂದ ಮಾಹಿತಿ. ನೈತಿಕ ಪೊಲೀಸ್ ಗಿರಿಗಳ ಸಂಖ್ಯೆ ಕಡಿಮೆಯಾದ್ದಂತೂ ಸತ್ಯ. ಸಮಾಜದಲ್ಲಿ ಸಾಮರಸ್ಯ ಇರಬೇಕು. ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ ಪೊಲೀಸ್ ಕಮಿಷನರ್, ಎಸ್ಪಿ, ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಹಾಗೆಂದು ಎಲ್ಲರ ಮೇಲೂ ಕೇಸ್ ಹಾಕಬೇಕೆಂದಲ್ಲ. ಯಾರು ನೈತಿಕ ಪೊಲೀಸ್ ಗಿರಿ ಮಾಡುತ್ತಾರೆ ಅವರ ಮೇಲೆ ಕ್ರಮ ಜರುಗಿಸಬೇಕು. ಯಾರು ನೈತಿಕ ಪೊಲೀಸ್ ಗಿರಿ ಮಾಡಿಲ್ಲವೋ ಅವರು ಯಾವುದೇ ಆತಂಕಿತರಾಗುವ ಅಗತ್ಯವಿಲ್ಲ. ಪೊಲೀಸ್ ಇಲಾಖೆಗೆ ಹೆಚ್ಚಿನ ಸಿಬ್ಬಂದಿ ಅಗ್ತವಿದೆ. ಆದ್ದರಿಂದ ಅದಕ್ಕೆ ವ್ಯವಸ್ಥೆ ಮಾಡುತ್ತಿದ್ದೇವೆ ಎಂದರು.

ಸಚಿವನಾದರೂ 'ದಲಿತ' ಎಂಬ ಕೀಳುಭಾವನೆಯಿಂದ ಮುಕ್ತಗೊಂಡಿಲ್ಲ ಎಂಬ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಸಾಮಾನ್ಯವಾಗಿ ಸಮಾಜದಲ್ಲಿ ಅಂತಹ ಮಾತುಗಳು ಬರುತ್ತಿರುತ್ತದೆ. ಅದನ್ನೇ ನಾನು ಹೇಳಿದ್ದು, ಅದರಲ್ಲಿ ಸುಳ್ಳೇನಿಲ್ಲ. ಆದರೆ ಸಿಎಂ ಪಟ್ಟ ದಲಿತ ಎಂಬ ಕಾರಣದಿಂದ ತಪ್ಪಿದ್ದಲ್ಲ. ಕಾಂಗ್ರೆಸ್ ನಲ್ಲಿ ಜಾತಿ ಆಧಾರದಲ್ಲಿ ಸಿಎಂ ಮಾಡುವುದಿಲ್ಲ. ಅವರ ಸಾಮರ್ಥ್ಯ, ಪಕ್ಷಕ್ಕೆಷ್ಟು ಕೆಲಸ ಮಾಡಿದ್ದಾರೆ, ಹಿರಿತನ ನೋಡಿ ಸಿಎಂ ಮಾಡುತ್ತಾರೆ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+