ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶ್ರೀನಿವಾಸ ವಿಶ್ವವಿದ್ಯಾಲಯದಿಂದ ಪೇಜಾವರ ಶ್ರೀಗಳಿಗೆ ಗೌರವ ಡಾಕ್ಟರೇಟ್

|
Google Oneindia Kannada News

ಮಂಗಳೂರು, ಫೆಬ್ರವರಿ 13: ಪೇಜಾವರ ಶ್ರೀ ಇನ್ನು ಡಾ.ಪೇಜಾವರ ಶ್ರೀ. ಹೌದು, ವಿಶ್ವವಿದ್ಯಾನಿಲಯವೊಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ. ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಪೇಜಾವರ ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ.

ಅಧ್ಯಾತ್ಮ ಮತ್ತು ಸಾಮಾಜಿಕ ಸುಧಾರಣೆ ಹಾಗೂ ಆಧ್ಯಾತ್ಮ ಕ್ಷೇತ್ರಕ್ಕೆ ತಮ್ಮ ಜೀವಿತಾವಧಿ ಪೂರ್ಣ ಕೊಡುಗೆ ನೀಡಿದ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಿದೆ.

ಬಾಳೆ ಹೊನ್ನೂರಿನ ರಂಭಾಪುರಿ ಶ್ರೀಗಳಿಗೆ ಗೌರವ ಡಾಕ್ಟರೇಟ್ಬಾಳೆ ಹೊನ್ನೂರಿನ ರಂಭಾಪುರಿ ಶ್ರೀಗಳಿಗೆ ಗೌರವ ಡಾಕ್ಟರೇಟ್

ಇದೇ ಬರುವ ಫೆಬ್ರವರಿ 15ರಂದು ಪದವಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ಘಟಿಕೋತ್ಸವ ಸಮಾರಂಭ ನಡೆಯಲಿದೆ. ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಉಪಕುಲಪತಿ ಡಾ.ಎಸ್.ಸಚ್ಚಿದಾನಂದ ಪದವಿ ಪ್ರಮಾಣ ಪತ್ರ ವಿತರಿಸಲಿದ್ದಾರೆ.

Honorary doctorate for Pejawara Swamiji

ಈ ಸಂದರ್ಭದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲು ತೀರ್ಮಾನಿಸಿಲಾಗಿದೆ ಎಂದು ಶ್ರೀನಿವಾಸ್ ಡೆಂಟಲ್ ಕಾಲೇಜಿನ ಡೀನ್ ಡಾ.ಮನೋಜ್ ವರ್ಮ ಮಾಹಿತಿ ನೀಡಿದ್ದಾರೆ.

 ಸ್ಯಾಂಡಲ್ ವುಡ್ ಕಿಂಗ್ ಗೆ ಗೌರವ ಡಾಕ್ಟರೇಟ್ ಸ್ಯಾಂಡಲ್ ವುಡ್ ಕಿಂಗ್ ಗೆ ಗೌರವ ಡಾಕ್ಟರೇಟ್

ಮೊದಲ ಬಾರಿಗೆ ಶ್ರೀನಿವಾಸ ಬಳಗದ ಎಲ್ಲ 13 ಸಂಸ್ಥೆಗಳು ಒಗ್ಗೂಡಿ ಸಂಸ್ಥಾಪಕರ ದಿನ ಆಚರಿಸುತ್ತಿದೆ.ಫೆಬ್ರವರಿ 14ರಂದು ಸಂಸ್ಥಾಪಕರ ದಿನದ ಕಾರ್ಯಕ್ರಮ ನಡೆಯಲಿದೆ.

English summary
Srinivas university of Mangaluru announced Honourary doctorate for Sri Vishwesha Teertha Swamiji of Pejawara mutt of Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X