Get Updates
Get notified of breaking news, exclusive insights, and must-see stories!

ಕರಾವಳಿಯಲ್ಲಿ ಮತ್ತೆ ಮಳೆ: ಮುಳುಗಿದ ಸುಬ್ರಹ್ಮಣ್ಯ ಹೊಸಮಠ ಸೇತುವೆ

ಮಂಗಳೂರು, ಆಗಸ್ಟ್ 08: ಸ್ವಲ್ಪ ದಿನ ಬಿಡುವು ಪಡೆದಿದ್ದ ವರುಣ ಕರಾವಳಿಯಲ್ಲಿ ಮತ್ತೇ ಅಬ್ಬರಿಸತೊಡಗಿದ್ದಾನೆ. ಕಳೆದ ರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ , ಸುಳ್ಯ, ಸುಬ್ರಹ್ಮಣ್ಯ, ಪುತ್ತೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ.

ಕಳೆದ ಕೆಲದಿನದಿಂದ ಮಳೆಯ ಅಬ್ಬರ ಕರಾವಳಿಯಲ್ಲಿ ತಗ್ಗಿದ್ದ ಕಾರಣ ಪ್ರವಾಹ ಪರಿಸ್ಥಿತಿ ಇಳಿಮುಖಗೊಂಡಿತ್ತು. ತಗ್ಗು ಪ್ರದೇಶಕ್ಕೆ ನುಗ್ಗಿದ್ದ ಮಳೆನೀರು ಹರಿದು ಹೋಗಿತ್ತು. ಈ ಹಿನ್ನೆಲೆಯಲ್ಲಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಕಳೆದ ಎರಡು ದಿನಗಳಿಂದ ಮತ್ತೇ ಮಳೆ ಸುರಿಯತೊಡಗಿದೆ.

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ಎಡೆಬಿಡದೆ ಮಳೆ ಮುಂದುವರಿದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಮತ್ತು ಕುಮಾರಧಾರಾ ಸೇರಿದಂತೆ ಇನ್ನಿತರ ನದಿಗಳು ತುಂಬಿ ಉಕ್ಕಿ ಹರಿಯತೊಡಗಿದೆ. ಸುಬ್ರಹ್ಮಣ್ಯ ಬಳಿಯ ಹೊಸಮಠ ಸೇತುವೆ ಮತ್ತೆ ಮುಳುಗಡೆಯಾಗಿದೆ.

Hosmata Bridge connecting Kukke Subramanya again submerged in flood water

ಕುಮಾರಧಾರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹೊಸಮಠ ಸೇತುವೆ ಮುಳುಗಡೆಯಾದ ಕಾರಣ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ - ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಬಂದ್ ಆಗಿದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಭಕ್ತರು ಪರದಾಡುವಂತಾಗಿದೆ.

Hosmata Bridge connecting Kukke Subramanya again submerged in flood water

ಇದೇ ವೇಳೆ, ಸಂಗಮ ಕ್ಷೇತ್ರ ಉಪ್ಪಿನಂಗಡಿ ಬಳಿ ನೀರಿನ ಮಟ್ಟ ಏರಿಕೆಯಾಗಿದ್ದು, ಕುಮಾರಧಾರಾ ಮತ್ತು ನೇತ್ರಾವತಿ ನದಿಗಳು ಸಂಗಮಗೊಂಡು ಸಹಸ್ರಲಿಂಗೇಶ್ವರ ದೇವಸ್ಥಾನದ ಅಂಗಣಕ್ಕೆ ನೀರು ನುಗ್ಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Hosmata Bridge connecting Kukke Subramanya again submerged in flood water

ಸೇತುವೆ ಮುಳುಗಡೆಯಾದ ಕಾರಣ ಸೇತುವೆಯ ಎರಡು ಬದಿಗಳಲ್ಲಿ ಪೊಲೀಸರು ಬ್ಯಾರಿಕೆಡ್ ಗಳನ್ನು ಅಳವಡಿಸಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದಾರೆ. ನೀರಿನ ಮಟ್ಟ ಇಳಿಕೆಯಾದ ಬಳಿಕ ಮತ್ತೆ ಸೇತುವೆಯ ಮೇಲೆ ವಾಹನ ಸಂಚಾರ ಆರಂಭವಾಗಲಿದೆ. ಇನ್ನು ಜಡಿ ಮಳೆಯಿಂದಾಗಿ ಹೆಚ್ಚಿನ ಹಾನಿ ಆಗದಿದ್ದರೂ, ಜನರು ಚಳಿಯಿಂದ ಥರಗುಟ್ಟುವಂತಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+