"ಕುಡ್ಲದ ಪಿಲಿಪರ್ಬ"ದಲ್ಲಿ ಗಮನ ಸೆಳೆದ ಹುಲಿ ನೃತ್ಯ ಸ್ಪರ್ಧೆ: ಬಹುಮಾನ ವಿಜೇತರ ಪಟ್ಟಿ ಹೀಗಿದೆ
ಮಂಗಳೂರು, ಅಕ್ಟೋಬರ್, 22: ಹುಲಿವೇಷವೆಂದರೆ ಎಲ್ಲರಿಗೂ ಕ್ರೇಜ್. ಮನೆಮನೆ, ಅಂಗಡಿ ಬೀದಿಗಳನ್ನು ಸುತ್ತಿ ಬ್ಯಾಂಡ್, ತಾಸೆಗಳ ಸೌಂಡ್‌ಗಳಿಗೆ ಸ್ಟೆಪ್ ಹಾಕುತ್ತಿದ್ದ ಹುಲಿವೇಷಕ್ಕೆ ಇತ್ತೀಚೆಗೆ ಭರ್ಜರಿ ವೇದಿಕೆಗಳು ಸೃಷ್ಟಿಯಾಗಿದೆ. ಈ ಮೂಲಕ ಹುಲಿವೇಷಗಳ ನಡುವೆ ಪಂಥ ನಡೆದು ಲಕ್ಷಾಂತರ ಮೊತ್ತದ ಬಹುಮಾನ ಇರುತ್ತದೆ. ಇಂದು ನಗರದ ನೆಹರೂ ಮೈದಾನದಲ್ಲಿ ನಡೆದ ಪಿಲಿಪರ್ಬದ ಪಂಥದಲ್ಲೂ ಕುಡ್ಲದ ಹುಲಿಗಳು ಭರ್ಜರಿ ನೃತ್ಯ ಪ್ರದರ್ಶಿಸಿ ಅಬ್ಬರಿಸಿತು.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಆಯೋಜನೆಗೊಂಡ ದ್ವಿತೀಯ ವರ್ಷದ "ಕುಡ್ಲದ ಪಿಲಿಪರ್ಬ-2023" ದಲ್ಲಿ ಹುಲಿವೇಷ ಸ್ಪರ್ಧಾಕೂಟ ನಡೆಯಿತು. ದ.ಕ.ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ, ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪಿಲಿಪರ್ಬ ನಡೆಯಿತು. ಕರಾವಳಿಯ ಜನಪ್ರಿಯ 15 ಹುಲಿವೇಷ ತಂಡಗಳು ಈ ಸ್ಪರ್ಧಾಕೂಟದಲ್ಲಿ ಪಾಲ್ಗೊಂಡು ವಿವಿಧ ಕಸರತ್ತು ಪ್ರದರ್ಶಿಸಿತು. ಜಿಲ್ಲೆಯ ಅತ್ಯಂತ ಪರಿಣಿತ ಆರು ಮಂದಿ ತೀರ್ಪುಗಾರರ ಸಮ್ಮುಖದಲ್ಲಿ, ಇಡೀ ದಿನ ಕಡಲನಗರಿ ಹುಲಿವೇಷಧಾರಿಗಳ ಭರ್ಜರಿ ಘರ್ಜನೆಗೆ ಸಾಕ್ಷಿಯಾಯಿತು.

ಪ್ರತೀ ಹುಲಿವೇಷ ತಂಡಗಳು ಮೆರವಣಿಗೆಯ ಮೂಲಕ ವೇದಿಕೆ ಪ್ರವೇಶಿಸಿ, 20 ನಿಮಿಷಗಳ ಕಾಲ ಪ್ರದರ್ಶನ ನೀಡಿತು. ಪ್ರತಿ ತಂಡವೂ 38 ಕೆ.ಜಿ. ಭಾರದ ಅಕ್ಕಿಮುಡಿ ಹಾರಿಸಿತು. ಕರಿಹುಲಿ, ಮರಿಹುಲಿ, ತಾಯಿ ಹುಲಿ, ಪಟ್ಟೆಹುಲಿ, ಚಿಟ್ಟೆ ಹುಲಿ ಹೀಗೆ ವೈವಿಧ್ಯಮಯ ಹುಲಿವೇಷಗಳು, ಭರ್ಜರಿ ತಾಸೆ - ಬ್ಯಾಂಡಿನ ಹಿಮ್ಮೇಳಕ್ಕೆ ಸಖತ್ ಸ್ಟೆಪ್ ಹಾಕಿತು.
ಸ್ಪರ್ಧಾಕೂಟ ನಡೆಯುವ ಮೈದಾನದಲ್ಲಿ 5 ಸಾವಿರ ಮಂದಿ ಕುಳಿತು ವೀಕ್ಷಿಸಲು ಸುಸಜ್ಜಿತ ಪ್ರೇಕ್ಷಕ ಗ್ಯಾಲರಿ ನಿರ್ಮಿಸಲಾಗಿತ್ತು. ಸ್ಕ್ರೀನ್ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಸ್ಪರ್ಧಾಳುಗಳಿಗೆ ಲಕ್ಷಾಂತರ ರೂಪಾಯಿ ಮೊತ್ತದ ಬಹುಮಾನವೂ ಇತ್ತು. ಪಿಲಿ ಪರ್ಬ 2023ರ ಚಾಂಪಿಯನ್ ಪ್ರಶಸ್ತಿ ಯನ್ನು ಜಗದಾಂಬಿಕಾ ಟೈಗರ್ಸ್ ಮುಳಿಹಿತ್ಲು, ದ್ವಿತೀಯ ಬಹುಮಾನವನ್ನು ನಂದಿಗುಡ್ಡೆ ಫ್ರೆಂಡ್ಸ್ ಬಾಬುಗುಡ್ಡೆ ತಂಡ ಪಡೆಯಿತು.
ವೈಯುಕ್ತಿಕ ಪ್ರದರ್ಶನ, ಕಪ್ಪು ಹುಲಿ, ಉತ್ತಮ ಬಣ್ಣಗಾರಿಕೆ, ಉತ್ತಮ ತಾಸೆ ಸೇರಿದಂತೆ ಹಲವು ವೈಯಕ್ತಿಕ ಪ್ರಶಸ್ತಿಗಳನ್ನೂ ನೀಡಲಾಗಿದೆ. ಮಧ್ಯರಾತ್ರಿ ತನಕ ನಡೆದ ಪಿಲಿಪರ್ಬವನ್ನು ಜನ ಮಿಸುಕಾಡದೇ ತದೇಕಚಿತ್ತದಿಂದ ನೋಡಿದ್ದು, ತುಳುನಾಡಿಗರಿಗೆ ಹುಲಿವೇಷದ ಮೇಲಿನ ಕ್ರೇಜ್ ಅನ್ನು ನಿರೂಪಿಸಿತು.
15 ತಂಡಗಳ ತೀವ್ರ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ, "ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ಜಗದಂಬಾ ಹುಲಿ" ತಂಡವು ಪಿಲಿಪರ್ಬ- 2023ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ಪುರಲ್ದಪ್ಪೆನ ಮೋಕೆದ ಬೊಲ್ಲಿಲು ಪೊಳಲಿ ಟೈಗರ್ಸ್ ತಂಡವು ತೃತೀಯ ಸ್ಥಾನವನ್ನು ಅಲಂಕರಿಸಿತು.
ಇನ್ನು ಪಿಲಿಪರ್ಬದ ವಿಶೇಷ ಬಹುಮಾನಗಳಾದ "ಕಪ್ಪು ಪಿಲಿ" ಪ್ರಶಸ್ತಿಯನ್ನು ಎಸ್.ಎಫ್.ಸಿ ಸೋಮೇಶ್ವರ ತಂಡ ಪಡೆದುಕೊಂಡರೆ, ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡವು "ಮರಿ ಹುಲಿ" ಪ್ರಶಸ್ತಿಯನ್ನು, ಬಹು ನಿರೀಕ್ಷಿತ ಪ್ರಶಸ್ತಿಯಾದ "ಪರ್ಬದ ಪಿಲಿ"ಯನ್ನು ಮಂಗಳೂರ್ ಫ್ರೆಂಡ್ಸ್ ಟೈಗರ್ಸ್ ಮುಳುಹಿತ್ಲು ಪಡೆದುಕೊಂಡಿತು.
ಶಿಸ್ತಿನ ತಂಡವಾಗಿ ಶಿವಶಕ್ತಿ ಟೈಗರ್ ಕುಂಜತ್ತೂರು ಮಂಜೇಶ್ವರ ಹೊರ ಹೊಮ್ಮಿದರೆ, ಬಣ್ಣಗಾರಿಕೆಯಲ್ಲಿ ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡವು ಹೆಚ್ಚುಗಾರಿಕೆ ಪಡೆಯಿತು. ಮುಡಿ ವಿಭಾಗದಲ್ಲಿ ವಿ.ಸಿ.ಎಸ್, ಮೂಡುಶೆಡ್ಡೆ (ವಿಷ್ಣು ಪಿಲಿಕುಲು) ಪ್ರಶಸ್ತಿ ಪಡೆದುಕೊಂಡರೆ, ಧರಣಿ ಮಂಡಲ ಹಾಗೂ ತಾಸೆ ವಿಭಾಗದಲ್ಲಿ ಯಂಗ್ ಬಾಯ್ಸ್ ಮುಳುಹಿತ್ಲು ಮಂಗಳಾದೇವಿ ಹುಲಿ ತಂಡ ಎರಡೂ ಪ್ರಶಸ್ತಿಗಳನ್ನು ಬಾಚಿಕೊಂಡಿತು.
ಕಾರ್ಯಕ್ರಮಕ್ಕೆ ವಿಶೇಷ ತಾರಾ ಮೆರುಗು ನೀಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನವು ತುಳುನಾಡಿನ ಮಣ್ಣಿನ ಸೊಗಡನ್ನು ಇಡೀ ನಾಡಿಗೆ ಪಸರಿಸುವ ಅದ್ಭುತ ಕಾರ್ಯವನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರ ಕಾರ್ಯ ಗಮನಾರ್ಹವಾದುದು. ಅವರ ಶ್ರಮ ಹಾಗೂ ಉತ್ಸಾಹದಿಂದಲೇ ಈ ಕಾರ್ಯಕ್ರಮ ಇಷ್ಟು ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂದು ಹೇಳಿದರು.
ಇದೇ ವೇಳೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಡಿಸಿಪಿ ಅಂಶು ಕುಮಾರ್, ನಟರಾದ ವಸಿಷ್ಟ ಸಿಂಹ, ಅರ್ಜುನ್ ಕಾಪಿಕಾಡ್ ಸೇರಿದಂತೆ ಹಲವು ಗಣ್ಯರು ಹುಲಿಗಳ ಕುಣಿತವನ್ನು ವೀಕ್ಷಿಸಿದರು.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications