ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳ್ತಂಗಡಿ; ನದಿಯಲ್ಲಿ ಸ್ಫೋಟಕ ಬಳಸಿ ಮೀನುಗಳ ಮಾರಣಹೋಮ

By ಮಂಗಳೂರು ಪ್ರತಿನಿಧಿ
|
Google Oneindia Kannada News

ಮಂಗಳೂರು, ಏಪ್ರಿಲ್ 22: ಬೆಳ್ತಂಗಡಿ ನಗರ ಪಂಚಾಯಿತಿ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿನಲ್ಲಿ ಮೀನುಗಳ ಮಾರಣಹೋಮವಾಗಿದೆ.

ಬೆಳ್ತಂಗಡಿ ನಗರ ಪಂಚಾಯಿತಿ ಕುಡಿಯುವ ನೀರಿನ ಪಂಪ್ ಹೌಸ್ ಬಳಿಯ ಸೋಮಾವತಿ ನದಿಯ ಗುಂಡಿಯಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಸ್ಫೋಟಕ ಬೆರೆಸಿ ಮೀನು ಹಿಡಿಯಲು ಯತ್ನಿಸಿ ನೀರನ್ನು ಕಲುಷಿತಗೊಳಿಸಿದ್ದಾರೆ. ಈ ಪರಿಣಾಮ ನದಿಯಲ್ಲಿನ ಮೀನುಗಳು ಸಾವನ್ನಪ್ಪಿವೆ.

Hundreds Of Fishes Died In Lake In Belthangadi

ರಾತ್ರಿ ಐದಾರು ಮಂದಿಯ ತಂಡ ನದಿ ಸಮೀಪ ಬಂದಿದ್ದು, ಸ್ಥಳೀಯರು ನೀಡಿದ ಖಚಿತ ಮಾಹಿತಿಯನ್ನು ಆಧರಿಸಿ ಬೆಳ್ತಂಗಡಿ ಠಾಣೆಯ ಎಸ್.ಐ. ನಂದಕುಮಾರ್ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಆಗ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ನದಿಯಲ್ಲಿದ್ದ ಬಹುತೇಕ ಮೀನುಗಳು ಸತ್ತು ಹೋಗಿವೆ. ಘಟನಾ ಸ್ಥಳಕ್ಕೆ ಮುಖ್ಯಾಧಿಕಾರಿ ಸುಧಾಕರ್, ನ.ಪಂ. ಸದಸ್ಯ ಶರತ್ ಕುಮಾರ್ ಭೇಟಿ ನೀಡಿದ್ದಾರೆ. ನೀರು ಸಂಪೂರ್ಣ ಕಲುಷಿತಗೊಂಡಿದೆ.

English summary
Hundreds of fishes died in lake which was a source of drinking water in belthangadi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X