• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧ: ಯುಟಿ ಖಾದರ್

|

ಮಂಗಳೂರು, ಫೆಬ್ರವರಿ 28:ಮಂಗಳೂರು ಹೊರವಲಯದ ಸೋಮೇಶ್ವರ-ಉಚ್ಚಿಲ ಪ್ರದೇಶದಲ್ಲಿ ಕಡಲ್ಕೊರೆತ ತಡೆಗೋಡೆ ಕಾಮಗಾರಿ ಇದೇ ಬರುವ ಮಾರ್ಚ್ 1ರಿಂದ ಆರಂಭವಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯುಟಿ ಖಾದರ್ ತಿಳಿಸಿದರು.

'ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಖಾಲಿ ಇಲ್ಲ'

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕಡಲ್ಕೊರೆತ ಸಮಸ್ಯೆಯಿದ ಬಳಲುತ್ತಿರುವ ಮುಕ್ಕಚ್ಚೇರಿ-ಸೋಮೇಶ್ವರ-ಉಚ್ಚಿಲ-ತಲಪಾಡಿ ಸಮುದ್ರ ಕಿನಾರೆಯಲ್ಲಿ ತಡೆಗೋಡೆ ಕಾಮಗಾರಿ ಮಾರ್ಚ್ ಒಂದರಿಂದ ಚಾಲನೆಗೊಳ್ಳಲಿದೆ. ಮಳೆಗಾಲ ಆರಂಭವಾಗುವ ಮೊದಲು ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂದು ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನಿಸಲಿದೆ ಎಂದ ಖಾದರ್, ಅಭ್ಯರ್ಥಿಯನ್ನು ಆರಿಸುವ ಬಗ್ಗೆ ಮಾಹಿತಿ ಸಂಗ್ರಹ ನಡೆಯುತ್ತಿದೆ. ಆದರೆ ನಾನು ಅಭ್ಯರ್ಥಿಯಲ್ಲ. ಟಿಕೆಟ್ ಆಕಾಂಕ್ಷಿ ಅಲ್ಲವೇ ಅಲ್ಲ ಎಂದು ಹೇಳಿದರು.

ಲೋಕಸಭಾ ಚುನಾವಣೆಗೆ ದ.ಕ.ದಲ್ಲಿ ಕೈ, ಬಿಜೆಪಿಯಿಂದ ಭಾರೀ ಸಿದ್ಧತೆ

ಮುಂಬರುವ ಚುನಾವಣೆಗೆ ಯಾರ ಹೆಸರನ್ನೂ ಇನ್ನೂ ಅಂತಿಮಗೊಳಿಸಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದರು.

English summary
Spoke with media persons in Mangaluru, Dakshina Kannada District incharge minister UT Khadar said that I am not ticket aspirant of Upcoming Lokasabha election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X