'ಪಕ್ಷೇತರನಾಗಿ ಸ್ಪರ್ಧಿಸಿದ್ದೇನೆ, ಗೆಲ್ಲುವ ವಿಶ್ವಾಸವಿದೆ'
ಮಂಗಳೂರು, ಡಿಸೆಂಬರ್ 14 : 'ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ. ಪಕ್ಷೇತರನಾಗಿ ಸ್ಪರ್ಧಿಸಿದ್ದೇನೆ. ಕಾರ್ಯಕರ್ತರು ನನ್ನ ಜೊತೆಗಿದ್ದು ಗೆಲ್ಲುವ ವಿಶ್ವಾಸವಿದೆ' ಎಂದು ಉಡುಪಿ-ದಕ್ಷಿಣ ಕನ್ನಡ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಸೋಮವಾರ ಮಂಗಳೂರಿನಲ್ಲಿ ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ಅವರು, ' ತಮ್ಮನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಬಗ್ಗೆ ಯಾವುದೇ ನೋಟಿಸ್ ಬಂದಿಲ್ಲ, ಪಕ್ಷದ ವರಿಷ್ಠರು ಯಾವುದೇ ಮಾತುಕತೆ ನಡೆಸಿಲ್ಲ. ತನ್ನನ್ನು ಉಚ್ಚಾಟನೆಗೆ ಶಿಫಾರಸು ಮಾಡಿದರೆ ತಾನೇನೂ ಮಾಡುವ ಹಾಗಿಲ್ಲ' ಎಂದರು. [ಕಾಂಗ್ರೆಸ್ ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ?]

'ಇದುವರೆಗೆ ಕಾಂಗ್ರೆಸ್‌ನ ಕಟ್ಟಾ ಕಾರ್ಯಕರ್ತನಾಗಿ ದುಡಿದಿದ್ದೇನೆ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸೋಲ್ಲ, ಅನ್ನುವವರಿಗೆ ಪಕ್ಷವೇ ಕರೆದು ಟಿಕೆಟ್ ನೀಡುತ್ತದೆ. ಇದು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ಪಕ್ಷದ ತಂತ್ರಗಾರಿಕೆಯಲ್ಲವೇ?' ಎಂದು ಪ್ರಶ್ನಿಸಿದರು. [ಪರಿಷತ್ ಚುನಾವಣೆ : ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿ]
'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಂಡಾಯವಾಗಿ ಚುನಾವಣೆಗೆ ನಿಂತವರನ್ನು ಮತ್ತೆ ಕಾಂಗ್ರೆಸ್ ಕರೆದು ಅವರಿಗೆ ಸ್ಥಾಯಿ ಸಮಿತಿಯಲ್ಲಿ ಸ್ಥಾನಮಾನ ನೀಡಿದ್ದಾದರೂ ಹೇಗೆ?' ಎಂದು ಕೇಳಿದ್ದಾರೆ. [ಕೊರ್ಗಿ ಜಯಪ್ರಕಾಶ್ ಹೆಗ್ಡೆ ವ್ಯಕ್ತಿ ಪರಿಚಯ]
ನಾವೀಗ ಫ್ರೀ ಬರ್ಡ್ : ಉಡುಪಿ-ದಕ್ಷಿಣ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹರಿಕೃಷ್ಣ ಬಂಟ್ವಾಳ್ ಅವರು ನಾವೀಗ ಫ್ರೀ ಬರ್ಡ್ ಎಂದು ಹೇಳಿದ್ದಾರೆ. ಹರಿಕೃಷ್ಣ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಹೈಕಮಾಂಡ್‌ಗೆ ಶಿಫಾರಸು ಮಾಡಿದ್ದಾರೆ.
ಒನ್ ಇಂಡಿಯಾ ಜೊತೆ ಮಾತನಾಡಿದ ಹರಿಕೃಷ್ಣ ಅವರು, 'ತಾವೀಗ ಫ್ರೀಬರ್ಡ್, ಹಾಗಾಗಿ ಪಕ್ಷದ ಯಾವುದೇ ನಿಬಂಧನೆಗೊಳಗಾಗುವುದಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದೇ ಗೆಲ್ಲುವುದಕ್ಕಾಗಿ' ಎಂದು ಹೇಳಿದ್ದಾರೆ. 'ಕಾಂಗ್ರೆಸ್‌ನಲ್ಲಿ ಕೆಲವೇ ಕೆಲವು ನಾಯಕರು ತಾವೇ ಸುಪ್ರೀಂ ಎಂದು ಕೊಂಡಿದ್ದಾರೆ. ಈಗ ನಮ್ಮನ್ನು ಉಚ್ಚಾಟಿಸಲು ಮುಂದಾಗಿದ್ದಾರೆ. ಮುಂದೆ ಇದೇ ನಾಯಕರನ್ನು ಪಕ್ಷದ ಕಾರ್ಯಕರ್ತರು ಉಚ್ಚಾಟಿಸಲಿದ್ದಾರೆ' ಎಂದು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications