ಹ್ಯಾಟ್ರಿಕ್ ಗೆಲುವಿನ ಸಿದ್ಧತೆಯಲ್ಲಿ ಎಂ.ವೀರಪ್ಪ ಮೊಯಿಲಿ
Recommended Video

ಮಂಗಳೂರು, ಡಿಸೆಂಬರ್ 26: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇಲ್ಲ ಎಂದು ಮಾಜಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ಸಂಜೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಟವಾಗಿ ಸ್ಪರ್ಧೆ ನಡೆಸಲಿದೆ. ಈ ಮೂಲಕ ಬಿಜೆಪಿ ಪ್ರಾಬಲ್ಯವನ್ನು ಮೆಟ್ಟಿ ನಿಲ್ಲಲಿದ್ದು, ರಾಜ್ಯದಲ್ಲಿ ಬಿಜೆಪಿ ಕೇವಲ 3 ಅಥವಾ 4 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಎರಡು ವರ್ಷಗಳಿಂದ ಎಂ ವೀರಪ್ಪ ಮೊಯಿಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಎರಡು ಸಲವೂ ಗೆಲುವು ಸಾಧಿಸಿದ್ದಾರೆ. ಮೂರನೇ ಬಾರಿ ಸ್ಪರ್ಧಿಸಿ ಹ್ಯಾಟ್ರಿಕ್ ಗೆಲುವು ಸಾಧಿಸುವ ಕನಸಿನಲ್ಲಿರುವ ಮೊಯಿಲಿ ಇದಕ್ಕೆ ಪೂರ್ವ ಸಿದ್ಧತೆಯನ್ನೂ ನಡೆಸಿದ್ದಾರೆ.












Click it and Unblock the Notifications