• search
  • Live TV
ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಶ್ರೇಣಿ ಪಡೆದ ರುತ್ ಕ್ಲ್ಯಾರ್ ಡಿಸಿಲ್ವ

|
Google Oneindia Kannada News

ಮಂಗಳೂರು, ಸೆಪ್ಟೆಂಬರ್ 13: ಇನ್ಸಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ನಡೆಸಿದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟಗೊಂಡಿದೆ. ಇದರಲ್ಲಿ ಮಂಗಳೂರಿನ ರುತ್ ಕ್ಲ್ಯಾರ್ ಡಿಸಿಲ್ವ ದೇಶಕ್ಕೆ ಪ್ರಥಮ ಶ್ರೇಣಿ ಪಡೆದಿದ್ದಾರೆ.

ರುತ್ ರಾಷ್ಟ್ರ ಮಟ್ಟದಲ್ಲಿ ಪ್ರಥಮ ರಾಂಕ್ ಪಡೆದ ಪ್ರಥಮ ಮಂಗಳೂರಿಗರಾಗಿದ್ದಾರೆ, ಈಕೆ ಮಂಗಳೂರಿನ ರೋಸಿ ಮಾರಿಯಾ ಡಿಸಿಲ್ಲಾ ಮತ್ತು ರಫರ್ಟ್ ಡಿಸಿಲ್ಲಾ ದಂಪತಿಯ ಪುತ್ರಿಯಾಗಿದ್ದಾಳೆ.

ಸಿಎ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ಶ್ರೇಣಿ ಪಡೆದ ರುತ್ ಇತಿಹಾಸ ಸೃಷ್ಟಿಸಿದ್ದು, ಕಳೆದ ಕೆಲ ವರ್ಷಗಳಿಂದ ಪರೀಕ್ಷೆಯನ್ನು ಎದುರಿಸಿದ್ದ ಆಕೆ ಛಲ ಬಿಡದೆ ಮತ್ತೆ ಪರೀಕ್ಷೆಯನ್ನು ಎದುರಿಸಿ ಸಾಧಿಸಿ ತೋರಿಸಿದ್ದಾರೆ ಎಂದು ಆಕೆಯ ಮಾರ್ಗದರ್ಶಕ ಹಾಗೂ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ (ಸಿಐಎಲ್)ನ ಸಂಚಾಲಕ, ನಂದಗೋಪಾಲ್ ಅಭಿಪ್ರಾಯ ತಿಳಿಸಿದ್ದಾರೆ.

ಮನೆಯಲ್ಲಿ ಸಡಗರ

ದೇಶಕ್ಕೆ ಪ್ರಥಮ ಶ್ರೇಣಿ ಪಡೆದ ರುತ್ ಸಾಧನೆ ಆಕೆಯ ಮಾರ್ಗದರ್ಶಕರ ಜೊತೆಗೆ, ಆಕೆಯ ಮನೆಯವರಲ್ಲಿಯೂ ಸಡಗರಕ್ಕೆ ಕಾರಣವಾಗಿದೆ. ಸಿಎ ಪರೀಕ್ಷೆಯ ಮೂರನೇ ಪ್ರಯತ್ನದಲ್ಲಿಯೇ ರುತ್ ಕ್ಲ್ಯಾರ್ ಅವರು ಪ್ರಥಮ ಶ್ರೇಣಿ ಪಡೆದಿರುವುದು ಮಂಗಳೂರಿಗೆ ಹಮ್ಮೆ ತರಿಸಿದೆ. ಪೋಷಕರು, ಮಾರ್ಗದರ್ಶಕರು ಹಾಗೂ ತರಬೇತುದಾರರು ರುತ್ ಅವರ ಸಾಧನೆಯನ್ನು ಅಭಿನಂದಿಸುತ್ತಿದ್ದು, ಮನೆಯಲ್ಲಿ ಸಡಗರ ಮನೆ ಮಾಡಿದೆ.

ರುತ್ ಕ್ಲ್ಯಾರ್ ಡಿಸಿಲ್ವಾರಿಗೆ ಸಿಎ ಬಗ್ಗೆ ತರಬೇತಿ ನೀಡಿರುವ ವಿವಿಯನ್ ಪ್ರತಿಕ್ರಿಯೆ ನೀಡಿ, ಆಕೆ ಸಂವಹನ ಕೌಶಲ್ಯ ಅತ್ಯುತ್ತಮವಾಗಿದ್ದು, ತನ್ನ ಸಾಮರ್ಥ್ಯದ ಬಗ್ಗೆ ದೃಢ ನಂಬಿಕೆಯನ್ನು ಆಕೆ ಹೊಂದಿರುವುದೇ ಆಕೆಯ ಈ ಸಾಧನೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಸಿಪಿಟಿ ಪರೀಕ್ಷೆಯಲ್ಲಿ ರುತ್ ಜಿಲ್ಲೆಗೆ ಪ್ರಥಮ ಶ್ರೇಣಿ ಗಳಿಸಿದ್ದರು. ಸೈಂಟ್ ತೆರೆಸಾದಲ್ಲಿ ಶಾಲಾ ವಿದ್ಯಾಭ್ಯಾಸ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ದೂರ ಶಿಕ್ಷಣದಿಂದ ಪದವಿ ಶಿಕ್ಷಣ ಪಡೆದಿದ್ದಾರೆ.

"ಈ ಬಾರಿಯ ಪರೀಕ್ಷೆ ಕಠಿಣವಾಗಿತ್ತು. ಆದರೆ ನಾನು ಅತ್ಯುತ್ತಮವಾಗಿ ಪರೀಕ್ಷೆಯನ್ನು ಬರೆದಿದ್ದೆ. ಆದರೆ ಪ್ರಥಮ ಶ್ರೇಣಿ ನಿರೀಕ್ಷೆ ಮಾಡಿರಲಿಲ್ಲ. ಸಿಎ ಪರೀಕ್ಷೆಯನ್ನು ತೇರ್ಗಡೆಯಾಗುವುದೇ ಅದ್ಭುತ,'' ಎಂದು ರುತ್ ಡಿಸಿಲ್ವಾ ಅಭಿಪ್ರಾಯ ಹಂಚಿಕೊಂಡಿದ್ದಾರೆ.

English summary
The results of the Chartered Accountant Examination were announced on Monday in which Ruth Clyar DeSilva of Mangaluru was ranked first in the country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X