ಗೋವು ಕಳ್ಳತನ ಕೋಮು ಸಾಮರಸ್ಯಕ್ಕೆ ಧಕ್ಕೆ-ವೇದವ್ಯಾಸ ಕಾಮತ್
ಮಂಗಳೂರು, ಜೂನ್ 28: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋವುಗಳ ಕಳ್ಳತನ ಹಾಗೂ ಸಾಗಾಟ ಪ್ರಕರಣ ಹೆಚ್ಚುತ್ತಿರುವುದಕ್ಕೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಕಳವಳ ವ್ಯಕ್ತಪಡಿಸಿದ್ದು, ಗೋವುಗಳ ಕಳ್ಳತನ ಕೋಮು ಸಾಮರಸ್ಯಕ್ಕೆ ಧಕ್ಕೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ತಲೆಯೆತ್ತಿರುವ ಗೋವು ಕಳ್ಳರ ಹಾವಳಿಯಿಂದ ಬಡ ಹೈನುಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಹೈನುಗಾರಿಕೆಯನ್ನೇ ನಂಬಿರುವ ಅನೇಕ ಕುಟುಂಬಗಳಿಗೆ ಮೂಲ ಆದಾಯವೇ ಇಲ್ಲದಂತಾಗಿದೆ. ಹಾಗಾಗಿ ಪೊಲೀಸ್ ಇಲಾಖೆ ಗೋಕಳ್ಳರ ಮೇಲೆ ಕಠಿಣ ಕ್ರಮ ಜರಗಿಸಬೇಕೆಂದು ಒತ್ತಾಯಿಸಿದರು.
ಕಳೆದ ಒಂದು ವರ್ಷದಿಂದ ಶಾಂತವಾಗಿದ್ದ ಕರಾವಳಿಯಲ್ಲಿ ಗೋವುಗಳ ಅಕ್ರಮ ಸಾಗಾಟ ಹಾಗೂ ಕಳ್ಳತನ ಹೆಚ್ಚಿರುವುದು ಸಾಮರಸ್ಯಕ್ಕೆ ಧಕ್ಕೆ ತರಲಿದೆ. ಹಾಗಾಗಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಈ ಕುರಿತು ಕಠಿಣ ಕಾನೂನು ಜಾರಿಗೆ ತರಬೇಕೆಂದು ಶಾಸಕರು ಆಗ್ರಹಿಸಿದ್ದಾರೆ.

ಅಲ್ಲದೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿ ವೇಳೆ ಬಾರಿಕೇಡ್ ಹಾಕುವ ಮೂಲಕ ವಾಹನ ತಪಾಸಣೆ ಮಾಡಿಸಿದರೆ ಮತ್ತು ಕಸಾಯಿ ಖಾನೆಯ ಬಳಿಯಲ್ಲೂ ಬಾರಿಕೇಡ್ ಅಳವಡಿಸಿ ಅಲ್ಲಿಗೆ ಬರುವ ಗೋವುಗಳ ಕುರಿತು ತನಿಖೆ ನಡೆಸಿದರೆ ಕಳ್ಳರನ್ನು ನಿಯಂತ್ರಿಸಬಹುದು ಎಂದು ಸಲಹೆ ನೀಡಿದ್ದಾರೆ.












Click it and Unblock the Notifications